ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ್ ಬಚಾವೋ ಪ್ರತಿಭಟನೆ

ahinda
ಅಹಿಂದ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ ಆಯೋಜಿಸಿರುವ ಧರಣಿ ಕುರಿತು ಕೋಲಾರದ ಪತ್ರಕರ್ತರ ಭವನದಲ್ಲಿ ಅಹಿಂದ ಸಂಘಟನೆಗಳ ಒಕ್ಕೂಟ ಪ್ರೊ.ಎ.ಹರಿರಾಮ್ ಕರಪತ್ರ ಬಿಡುಗಡೆಗೊಳಿಸಿದರು. ಸೂಲಿಕುಂಟೆ ಆನಂದ್, ಮುನೇಶ್, ಮೋಹನ್, ಮಂಜುನಾಥ್ ಇದ್ದರು.
Published on

ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಅಹಿಂದ ಸಂಘಟನೆಗಳ ಒಕ್ಕೂಟದಿಂದ ಆ.28ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಹಠಾವೋ, ದಲಿತ್ ಬಚಾವೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ರಾಜ್ಯ ಸಂಚಾಲಕ ಪ್ರೊ.ಎ.ಹರಿರಾಮ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಹಾದಿಯನ್ನೇ ಕಾಂಗ್ರೆಸ್ ಹಿಡಿದಿದೆ, ದಲಿತರಿಗೆ ರಕ್ಷಣೆ ನೀಡುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಹೋರಾಟ ಅನಿವಾರ್ಯವಾಗಿದೆ ಎಂದರು.
ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ದಲಿತ ವಿರೋಽ ನೀತಿ ಅನುಸರಿಸುತ್ತಿದ್ದ ಕಾರಣ ಕಾಂಗ್ರೆಸ್ ಸರ್ಕಾರವು ಕಳೆದ ಚುನಾವಣೆಯಲ್ಲಿ ಅಧಿಕಾರಕ್ಕೆ ತರಬೇಕಾಯಿತು. ಆದರೆ ಈಗ ಅವರು ದಲಿತರನ್ನು ವಂಚಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಕ್ರಮೇಣ ಹೆಚ್ಚಾಗಿವೆ. ಡಿಸಿ, ಎಸಿಗಳು ದಲಿತರ ಜಮೀನು ಮಾರಾಟದ ಹೆಸರಿನಲ್ಲಿ ಹಣ ದೋಚುತ್ತಿದ್ದಾರೆ. ವಿದ್ಯಾರ್ಥಿ ವೇತನ ನೀಡುವುದು ವ್ಯರ್ಥ ಎಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಅಽಕಾರಿಯೊಬ್ಬರು ಹೇಳುತ್ತಾರೆ. ಸಿಎಂ ಸಿದ್ದರಾಮಯ್ಯ ಹೊಸ ಯೋಜನೆ ಜಾರಿಗೆ ತರುವ ಬದಲು ಇರುವ ಯೋಜನೆಗಳನ್ನೇ ತೆಗೆಯಲು ಮುಂದಾಗಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ನೂರಾರು ಕೋಟಿ ಕಳುವು ಮಾಡಲಾಗಿದೆ. ವಿದ್ಯಾರ್ಥಿ ವೇತನ, ಪ್ರಶಸ್ತಿ ಹಣ, ಎಸ್ಸಿಪಿ-ಟಿಎಸ್ಪಿ ಸೇರಿದಂತೆ ೧೪ ಸಾವಿರ ಕೋಟಿರೂ ಹಣ ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಂಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ದಲಿತ ಸಮಾಜಸೇನೆ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಮಾತನಾಡಿ, 1975ರಿಂದಲೂ ದಲಿತ ಚಳುವಳಿ ಒಗ್ಗಟ್ಟಾಗಿಯೇ ಬಂದಿದೆ. ಕೆಲ ಮುಖಂಡರು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಮುಖಂಡರ ಬೆಂಬಲಿಗರಾಗಿದ್ದಾರೆ ಹೊರತು ಹೋರಾಟಗಾರರಲ್ಲ ಎಂದು ಹೇಳಿದರು.
ಒಕ್ಕೂಟದ ಪದಾಽಕಾರಿಗಳಾದ ಚಳವಳಿ ರಾಜಣ್ಣ, ಶಂಕರ್ ರಾಮಲಿಂಗಯ್ಯ, ಸಿದ್ದಾಪುರ ಮಂಜುನಾಥ್, ಸಿದ್ದಾರ್ಥ್, ಆನಂದ್, ಜಗನ್ನಾಥ್, ಮುನೇಶ್, ಮೋಹನ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net