ಆಗಸ್ಟ್ 20 ರಂದು ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆ

D. Devaraj Arasu's birthday is tomorrow
ಡಿ. ದೇವರಾಜ್ ಅರಸು
Published on

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೈಸೂರು ಇವರ ವತಿಯಿಂದ ಆಗಸ್ಟ್ 20 ರಂದು ಬೆಳಗ್ಗೆ 11:30 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಉದ್ಘಾಟನೆ ಮಾಡಲಿದ್ದು, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ ಹರೀಶ್ ಗೌಡ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧೃವನಾರಾಯಣ, ಹಾಗೂ ವಿಧಾನ ಪರಿಷತ್‌ನ ಸದಸ್ಯರುಗಳಾದ ಹೆಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಡಾ.ಯತೀಂದ್ರ ಎಸ್ ಮತ್ತು ವಿವೇಕಾನಂದ ಕೆ ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net