ಜುಲೈ 16ರಂದು ಬೆಂ.ವಿವಿ ಪಿಎಚ್.ಡಿ. ಪ್ರವೇಶ ಪರೀಕ್ಷೆ

exam
Published on



ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು 2023ನೇ ಸಾಲಿನಲ್ಲಿ ಪಿಎಚ್.ಡಿ. ಪದವಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜು.16ರಂದು ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆ ನಡೆಸುತ್ತಿದೆ.

ಕಲಾ ಮತ್ತು ಕಾನೂನು ವಿಷಯಗಳ ಪರೀಕ್ಷೆಯನ್ನು ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಎದುರಿರುವ ಕೆಎಲ್‌ಇ ಸೊಸೈಟಿ ಪದವಿ ಕಾಲೇಜಿನಲ್ಲಿ ಹಾಗೂ ವಿಜ್ಞಾನ, ವಾಣಿಜ್ಯ, ನಿರ್ವಹಣಾ ಮತ್ತು ಶಿಕ್ಷಣ ವಿಷಯದ ಕೋರ್ಸ್‌ಗಳಿಗೆ ಕೆಂಗೇರಿ ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಂಡ್ ಬಿಜಿನೆಸ್ ಸ್ಟಡೀಸ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ಬೆಂ.ವಿವಿ ವೆಬ್‌ಸೈಟ್ bangaloreuniversity.ac.in ನಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ವಿವಿ ಮೌಲ್ಯಮಾಪನ ಕುಲಸಚಿರುವ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net