ಸೆ.10ರಂದು ನಾಮಫಲಕ ಕಲಾವಿದರ ಜಿಲ್ಲಾ ಸಂಘಕ್ಕೆ ಚಾಲನೆ

Jagadiesh
ನಾಮಫಲಕ ಕಲಾವಿದರ ಸಂಘದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಎಂ.ಬಿ.ಜಗದೀಶ್.
Published on

ಶಿವಮೊಗ್ಗ: ರಾಜ್ಯ ನಾಮಫಲಕ ಕಲಾವಿದರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಉದ್ಘಾಟನಾ ಸಮಾರಂಭವು ಸೆ.10ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ನಡೆಯಲಿದೆ ಎಂದು ಜಿಲ್ಲಾ ಶಾಖೆ ಅಧ್ಯಕ್ಷ ಎಂ.ಬಿ.ಜಗದೀಶ್ ತಿಳಿಸಿದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಶಾಖೆಯನ್ನು ಉದ್ಘಾಟಿಸುವರು. ಮೇಯರ್ ಎಸ್.ಶಿವಕುಮಾರ್, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಮುಖ್ಯ ಅತಿಥಿಗಳಾಗಿದ್ದು ಸಂಘದ ರಾಜ್ಯಾಧ್ಯಕ್ಷ ಬಿ.ಕೆ.ಗುರುರಾಜ್ ಅಧ್ಯಕ್ಷತೆ ವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂಘವನ್ನು ಪ್ರಸ್ತುತ ಶಿವಮೊಗ್ಗ ನಗರಕ್ಕೆ ಸೀಮಿತಗೊಳಿಸಲಾಗಿದೆ. 120 ಕಲಾವಿದರು ಸದಸ್ಯತ್ವ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದ ಸಮಿತಿ ರಚಿಸಿ ಸಂಘವನ್ನು ಜಿಲ್ಲೆಗೆ ವಿಸ್ತರಿಸಲಾಗುವುದು ಎಂದರು. ಉಪಾಧ್ಯಕ್ಷ ಮಹೇಶ್, ಪ್ರಧಾನ ಕಾರ್ಯದರ್ಶಿ ಜಿ.ಕೆ.ಮಧುಸೂಧನ್, ಸಹ ಕಾರ್ಯದರ್ಶಿ ಎಸ್.ಎಂ.ಶಿವಕುಮಾರನ್, ಖಜಾಂಚಿ ಎಸ್.ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಜಾವಿದ್, ಎನ್.ಮಹೇಶ್, ವಿಜಯಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net