

ಶಿವಮೊಗ್ಗ: ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿ ಜಿಲ್ಲಾ ಶಾಖೆ ಉದ್ಘಾಟನಾ ಸಮಾರಂಭ ಸೆ.3ರ ಬೆಳಗ್ಗೆ 10.30ಕ್ಕೆ ಕುವೆಂಪು ರಸ್ತೆಯ ಆರ್ಯವೈಶ್ಯ ಶ್ರೀರಾಮ ಸಂಘದ ರಾಘವ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಎಂ.ಸೋಮಶೇಖರ್ ತಿಳಿಸಿದರು.
ಸಮಿತಿ ಸಂಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷ ಎಸ್.ರಘುಕುಮಾರ್ ಶಾಖೆ ಉದ್ಘಾಟಿಸುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ‌್ಯಾನಾಯ್ಕಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಸಮಿತಿಯ ಮೂಲ ಉದ್ದೇಶವಾಗಿದೆ. ಬಡವರು, ಶೋಷಿತರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಆದ್ಯತೆ ನೀಡಲಾಗುವುದು. ಮಲೆನಾಡಿನ ಹೆಬ್ಬಾಗಿಲು ಕಲೆ, ಸಾಹಿತ್ಯ, ಸಂಸ್ಕೃತಿ, ಕವಿ, ಶರಣರು, ರಾಜಕೀಯ ಗಣ್ಯರು, ಹೋರಾಟಗಾರರರ ನೆಲೆಬೀಡಾಗಿರುವ ಶಿವಮೊಗ್ಗದಲ್ಲಿ ಸರ್ವಧರ್ಮಗಳ ಅಭಿವೃದ್ಧಿ, ಶೈಕ್ಷಣಿಕ ಏಳಿಗೆಗೆ ಒತ್ತು ನೀಡಲಾಗುವುದು. ಉದ್ಘಾಟನಾ ಸಮಾರಂಭದಲ್ಲಿ ಸಮಿತಿಯ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರೀಯ ಪದಾಧಿಕಾರಿಗಳು ಪಾಲ್ಗೊಳ್ಳ್ಳುವರು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎನ್.ರಾಜೇಶ್, ಖಜಾಂಚಿ ಸಿ.ಯುವರಾಜ್ ನಾಯ್ಕ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮಹಮದ್ ಷರೀಫ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸೌಮ್ಯಾ, ಉಪಾಧ್ಯಕ್ಷೆ ಭವ್ಯಾ, ಶಾರದಾ ಸುದ್ದಿಗೋಷ್ಠಿಯಲ್ಲಿದ್ದರು.