12ರಂದು ಸೌರ್ಹಾದವೇ ಹಬ್ಬ, ಶಾಂತಿ ಜಾಥಾ

advocate k.p.Sripal
ವಕೀಲ, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಕೆ.ಪಿ.ಶ್ರೀಪಾಲ್
Published on

ಶಿವಮೊಗ್ಗ: ಬ್ರ್ಯಾಂಡ್ ಶಿವಮೊಗ್ಗವನ್ನು ಬೆಳೆಸಲು, ಶಾಂತಿ, ಸೌರ್ಹಾದತೆ ಕಾಪಾಡುವಂತೆ ಜಾಗೃತಿ ಮತ್ತು ತಿಳಿವಳಿಕೆ ಮೂಡಿಸಲು ಸೆ.12ರಂದು ಮಧ್ಯಾಹ್ನ 3ಕ್ಕೆ ಸೌರ್ಹಾದವೇ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ. ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈನ್ಸ್ ಮೈದಾನದವರೆಗೆ ಶಾಂತಿ ಮೆರವಣಿಗೆ ಕೂಡ ನಡೆಯಲಿದೆ.

ಕಳೆದೆರಡು ವರ್ಷದಿಂದ ಈ ಶಾಂತಿ ಜಾಥಾ ಹಮ್ಮಿಕೊಂಡಿದ್ದೆವು. ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳು ಜತೆಯಾಗಿಯೇ ಬಂದಿದ್ದು ಸೌಹಾರ್ದತೆ ಸಂಕೇತದ ಹಿನ್ನೆಲೆಯಲ್ಲಿ ನಾವೆಲ್ಲರೂ ಒಟ್ಟಾಗಿದ್ದೇವೆ ಎಂಬುದನ್ನು ಸಾರಬೇಕಿದೆ. ಆ ನಿಟ್ಟಿನಲ್ಲಿ ಸೌಹಾರ್ದ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಕೀಲ, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಕೆ.ಪಿ.ಶ್ರೀಪಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸರ್ವ ಜನಾಂಗದ ಶಾಂತಿಯ ನಾಡು ನಮ್ಮ ಶಿವಮೊಗ್ಗ ಎಂಬ ಹಿನ್ನಲೆಯಲ್ಲಿ ಈ ಜಾಥಾ ನಡೆಯಲಿದ್ದು, ಈ ಜಾಥಾ ಧರ್ಮಾತೀತವಾಗಿದೆ. ಮತ್ತು ಈ ಜಾಥಾದಲ್ಲಿ ಬಸವಕೇಂದ್ರ, ಜಡೆ ಮಠದ ಶ್ರೀಗಳು ಸೇರಿ ಹಲವು ಸ್ವಾಮೀಜಿಗಳ ಜತೆಗೆ ಜಾಮೀಯಾ ಮಸೀದಿಯ ಧರ್ಮಗುರುಗಳು, ಮೌಲ್ವಿಗಳು, ಾದರ್‌ಗಳು ಹಾಗೂ ಪಕ್ಷಾತೀತವಾಗಿ ರಾಜಕೀಯ ಮುಖಂಡರು ಸಹ ಭಾಗವಹಿಸುತ್ತಾರೆ. ಸುಮಾರು 5 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದರು.
ಮೆರವಣಿಗೆ ನಂತರ ಸೈನ್ಸ್ ಮೈದಾನದಲ್ಲಿ ಶಾಂತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಠಾಧೀಶರು, ಫಾದರ್‌ಗಳು ಹಾಗೂ ಮೌಲ್ವಿಗಳು ಮಾತ್ರ ಇರುತ್ತಾರೆ. ಅವರೇ ಶಾಂತಿಯ ಸಂದೇಶಗಳನ್ನು ನೀಡುತ್ತಾರೆ. ಜತೆಗೆ ಶಿವಮೊಗ್ಗದ ಭೂಪಟವನ್ನು ರಚಿಸಲಿದ್ದು ಅಲ್ಲಿ ಸಂಘ, ಸಂಸ್ಥೆಗಳು, ವ್ಯಾಪಾರಸ್ಥರು, ಶಾಂತಿ ಸಹಿಯ ಸ್ಟಿಕರ್‌ಗಳನ್ನು ಅಂಟಿಸಬಹುದು ಎಂದರು.
ಪ್ರಮುಖರಾದ ಎಚ್.ಆರ್.ಬಸವರಾಜಪ್ಪ, ಎಂ. ಗುರುಮೂರ್ತಿ, ಫಾದರ್ ಪಿಯುಸ್ ಡಿಸೋಜ, ಜಗದೀಶ್, ಕಿರಣ್ ಕುಮಾರ್, ಅರಸಾಳು ಸುರೇಶ್, ರಫಿ, ಮೊಹಮ್ಮದ್ ಇಸ್ಮಾಯಿಲ್, ಶ್ರೀಕಾಂತ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net