

- ಸ್ವಾತಂತ್ರ್ಯ ದಿನಾಚರಣೆ ವೀಕ್ಷಿಸಲು ವಿಶೇಷ ಅತಿಥಿಗಳಾಗಿ ದೇಶಾದ್ಯಂತ 50 ದಾದಿಯರ ಆಹ್ವಾನ
ನವದೆಹಲಿ: ದೇಶದಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆ ಮನೆ ಮಾಡಿದೆ. 10ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರೆವೇರಿಸಿದರು. ಈ ವೇಳೆ ದಾದಿಯರು, ವೈದ್ಯರು ಮತ್ತು ಇತರರನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಕೆಂಪುಕೋಟೆಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ವೀಕ್ಷಿಸಲು ದೇಶದಾದ್ಯಂತದ 50 ದಾದಿಯರು ಮತ್ತು ಅವರ ಕುಟುಂಬ ಸದಸ್ಯರನ್ನು ವಿಶೇಷ ಅತಿಥಿಗಳಾಗಿ ಭಾಗವಹಿಸಲು ಆಹ್ವಾನಿಸಲಾಯಿತು. ಈ ವಿಶೇಷ ಅತಿಥಿಗಳು ಸರಪಂಚರು, ಶಿಕ್ಷಕರು, ರೈತರು ಮತ್ತು ಮೀನುಗಾರರಿಂದ ಹಿಡಿದು ಜೀವನದ ವಿವಿಧ ಹಂತಗಳ 1800 ವಿಶೇಷ ಅತಿಥಿಗಳು ಭಾಗವಹಿಸಿದ್ದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿ, ದೇಶದ ಭವಿಷ್ಯವನ್ನು ಬದಲಾಯಿಸಲು ದಾದಿಯರು, ವೈದ್ಯರು ಮತ್ತು ಇತರರ ಪ್ರಯತ್ನಗಳಿಗಾಗಿ ಶ್ಲಾಘಿಸಿದರು. ಮಾನವ ಕಾರ್ಯಕ್ಷಮತೆ ಇಲ್ಲದೆ ಪ್ರಪಂಚದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೋವಿಡ್ ನಮಗೆ ಕಲಿಸಿದೆ. ದೇಶದ ಯೂನಿವರ್ಸಲ್ ಹೆಲ್ತ್ ಕವರೇಜ್ ಅನ್ನು ಸುಧಾರಿಸಲು ಸರ್ಕಾರದ ಪ್ರಯತ್ನಗಳಿಗೆ ಒತ್ತು ನೀಡಲಾಗಿದೆ. ಸರ್ಕಾರವು ಆಯುಷ್ಮಾನ್ ಭಾರತ್‌ನಲ್ಲಿ 70,000 ಕೋಟಿ ರೂ., ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ಆರೋಗ್ಯ ಖಾತರಿ ನೀಡುತ್ತದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, 200 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆಗಳ ಮೈಲಿಗಲ್ಲನ್ನು ಸಾಧಿಸುವಲ್ಲಿ ಆರೋಗ್ಯ ಕಾರ್ಯಕರ್ತರು ವಿಶೇಷವಾಗಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಸಮರ್ಪಣೆ ಮತ್ತು ನಿರಂತರ ಪ್ರಯತ್ನ ಪಟ್ಟಿದ್ದಾರೆಂದು ಶ್ಲಾಘಿಸಿದ್ದಾರೆ.
ಒಂದು ಭೂಮಿ, ಒಂದು ಆರೋಗ್ಯ ಮತ್ತು ಒಂದು ಭವಿಷ್ಯದ ದೃಷ್ಟಿಯನ್ನು ಎತ್ತಿ ಹಿಡಿದ ಅವರು, “ಜನೌಷಧಿ ಕೇಂದ್ರಗಳು ದೇಶದ ಮಧ್ಯಮ ವರ್ಗದವರಿಗೆ ಹೊಸ ಶಕ್ತಿಯನ್ನು ನೀಡಿವೆ. ಈಗಿನ 10000 ಕೇಂದ್ರಗಳಲ್ಲಿರುವ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 25,000ಕ್ಕೆ ಹೆಚ್ಚಿಸುವ ಗುರಿಯೊಂದಿಗೆ ಮುಂದಿನ ದಿನಗಳಲ್ಲಿ ರಾಷ್ಟ್ರವು ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.