ಮೊದಲ ದಿನ ಪಿಯು ಪರೀಕ್ಷೆ ಸುಸೂತ್ರ ;ಗುಲಾಬಿ ಹೂವು ನೀಡಿ ಶುಭಕೋರಿದ ಶಿಕ್ಷಣ ಸಚಿವ ನಾಗೇಶ್

ತಿಪಟೂರಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗುಲಾಬಿ ಹೂವು ನೀಡಿ ಆಲ್‌ದಿ ಬೆಸ್ಟ್ ಹೇಳಿ ಶುಭಕೋರಿದರು.
ತಿಪಟೂರಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗುಲಾಬಿ ಹೂವು ನೀಡಿ ಆಲ್‌ದಿ ಬೆಸ್ಟ್ ಹೇಳಿ ಶುಭಕೋರಿದರು.
Published on

ತುಮಕೂರು/ತಿಪಟೂರು: ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳಲ್ಲಿ 22388 ವಿದ್ಯಾರ್ಥಿಗಳು ಗುರುವಾರ ದ್ವಿತೀಯ ಪಿಯು ಕನ್ನಡ ವಿಷಯ ಪರೀಕ್ಷೆ ಬರೆದರು.

ತಿಪಟೂರಿನ ಪರೀಕ್ಷಾ ಕೇಂದ್ರದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಕೊಟ್ಟು ‘ಆಲ್ ದಿ ಬೆಸ್ಟ್’ ಹೇಳಿ ಪರೀಕ್ಷೆ ಬರೆಯಲು ಮಾನಸಿಕ ಸ್ಥೈರ್ಯ ತುಂಬಿದ್ದು ವಿಶೇಷವಾಗಿತ್ತು. ಪರೀಕ್ಷೆಗಳು ಮಾ.29ರವರೆಗೆ ನಡೆಯಲಿವೆೆ.

ಕನ್ನಡ ವಿಷಯ ಪರೀಕ್ಷೆಗೆ 23818 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 22388 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 1430 ವಿದ್ಯಾರ್ಥಿಗಳು ಗೈರಾದರು. ಮೊದಲ ದಿನ ಸುಸೂತ್ರವಾಗಿ ನಡೆಯಿತು. ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿಗಳು ಆತಂಕದಲ್ಲಿಯೇ ಇದ್ದರಾದರೂ, ಪರೀಕ್ಷೆ ಮುಗಿಸಿ ಹೊರಬಂದಾಗ ನಗುಮುಖದಲ್ಲಿ ವಾಪಸಾದರು.

ಶಿಕ್ಷಣ ಸಚಿವರಿಂದ ಗುಲಾಬಿ ಹೂವು: ತಿಪಟೂರು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಶುಭ ಕೋರಿದರು. ಪರೀಕ್ಷಾ ಕೊಠಡಿಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಪ್ರಶ್ನೆ ಪತ್ರಿಕೆ ಸರಬರಾಜು ಮಾಡಲು ನೇಮಕವಾಗಿದ್ದ ತ್ರಿಸದಸ್ಯ ಸಮಿತಿ ಜಿಲ್ಲಾ ಖಜಾನೆಯಿಂದ ಒಟ್ಟು 25 ಕೇಂದ್ರಗಳಿಗೆ, 8 ಮಾರ್ಗಗಳ ಮೂಲಕ ಪ್ರಶ್ನೆ ಪತ್ರಿಕೆ ವಿತರಿಸಿತು.

ಮಧುಗಿರಿ ಖಜಾನೆಯಿಂದ 10 ಕೇಂದ್ರಗಳಿಗೆ 4 ಮಾರ್ಗಗಳ ಮೂಲಕ ಪ್ರಶ್ನೆ ಪತ್ರಿಕೆ ರವಾನೆ ಮಾಡಲಾಯಿತು. ವಾಹನಗಳಿಗೆ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಮಾಡಲಾಗಿತ್ತು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಾಗಿತ್ತು. 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಬೆಳಗ್ಗೆ 9 ರಿಂದ ಸಂಜೆ 5.30ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

5. ತುಮಕೂರು ಎಂಪ್ರೆಸ್ ಬಾಲಕಿಯರ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರವನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಎಸ್ಪಿ ರಾಹುಲ್ ಕುಮಾರ್ ಶಹಾಪೂರವಾಡ್ ಪರಿಶೀಲಿಸಿದರು.
5. ತುಮಕೂರು ಎಂಪ್ರೆಸ್ ಬಾಲಕಿಯರ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರವನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಎಸ್ಪಿ ರಾಹುಲ್ ಕುಮಾರ್ ಶಹಾಪೂರವಾಡ್ ಪರಿಶೀಲಿಸಿದರು.

ತುಮಕೂರು ನಗರದ ಕೆಲವು ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಎಸ್ಪಿ ರಾಹುಲ್ ಕುಮಾರ್ ಶಹಾಪೂರವಾಡ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ ಮತ್ತಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಮೂಲಸೌಕರ್ಯ ಪರಿಶೀಲಿಸಿದರು.

ಮೊದಲ ದಿನ ಸುಸೂತ್ರವಾಗಿ ಪರೀಕ್ಷೆ ನಡೆದಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ ತಿಳಿಸಿದರು.

ತುಮಕೂರಿನ ವಿದ್ಯಾನಿಧಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ನಿಸರ್ಗ ಮಲ್ಲಿಗೆ ಇಡ್ಲಿ ಹೋಟೆಲ್ ವತಿಯಿಂದ ಉಚಿತವಾಗಿ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ ನೀಡಲಾಯಿತು.
ತುಮಕೂರಿನ ವಿದ್ಯಾನಿಧಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ನಿಸರ್ಗ ಮಲ್ಲಿಗೆ ಇಡ್ಲಿ ಹೋಟೆಲ್ ವತಿಯಿಂದ ಉಚಿತವಾಗಿ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ ನೀಡಲಾಯಿತು.

ಉಚಿತ ಉಪಹಾರ: ದ್ವಿತೀಯ ಪಿಯು ಪರೀಕ್ಷೆ ಬರೆಯಲು ಬಂದಿದ್ದ ಗ್ರಾಮೀಣ ವಿದ್ಯಾರ್ಥಿಗಳಿಗೆ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಹಾಗೂ ವಿದ್ಯಾನಿಧಿ ಕಾಲೇಜಿನ ಪರೀಕ್ಷಾ ಕೇಂದ್ರಗಳಲ್ಲಿ ನಿಸರ್ಗ ಇಡ್ಲಿ ಹೋಟೆಲ್‌ನ ನಿಸರ್ಗ ರಮೇಶ್ ಉಚಿತ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು. ಸಹಸ್ರಾರು ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net