

ಬೆಂಗಳೂರು: ಓಣಂ ಹಬ್ಬದ ನಿಮಿತ್ತ ರಾಜ್ಯದಿಂದ ಕೇರಳಕ್ಕೆ ಕೆಎಸ್ಆರ್ಟಿಸಿ ವಿಶೇಷ ಬಸ್ಗಳು ಸಂಚರಿಸಲಿವೆ. ಹಬ್ಬದ ನಿಮಿತ್ತ ಆಗಸ್ಟ್ 24ರಿಂದ ಸೆಪ್ಟೆಂಬರ್ 6ರವರೆಗೆ ಈ ವಿಶೇಷ ಬಸ್ಗಳ ವ್ಯವಸ್ಥೆ ಇರಲಿದೆ.
ಬೆಂಗಳೂರಿನಿಂದ ಕಣ್ಣೂರು, ಎರ್ನಾಕುಲಂ, ಕಾನ್ಹಂಗಾಡ್, ಕಾಸರಗೋಡು, ಕೊಟ್ಟಾಯಂ, ಕಲ್ಲಿಕೋಟೆ, ಪಾಲಘಾಟ್, ತ್ರಿಶೂರ, ತಿರುವನಂತಪುರಂ ಮತ್ತು ವಡಕರಾಗಳಿಗೆ ಬಸ್ ತೆರಳಲಿದ್ದು, ಹಾಗೇ ಈ ಪ್ರದೇಶಗಳಿಂದಲೂ ಬೆಂಗಳೂರಿಗೆ ಬಸ್ ಬರಲಿದೆ.
ಇನ್ನು ಮೈಸೂರಿನಿಂದ ತಿರುವನಂತಪುರಂ, ಎರ್ನಾಕುಲಂ ಮತ್ತು ಕೊಟ್ಟಾಯಂಗೆ ಬಸ್ ಬಿಡಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ. ಇದನ್ನೂ ಓದಿ: ಐಪಿಎಲ್ ಭಾರತದಲ್ಲೇ ನಡೆಯಲಿ, ಹೈಕೋರ್ಟ್ ಮೆಟ್ಟಿಲೇರಿದ ಕ್ರಿಕೆಟ್ ಪ್ರೇಮಿ ವಕೀಲ!
ಹಾಗೇ, ಕರ್ನಾಟಕದಿಂದ ಕೇರಳಕ್ಕೆ ಹೋಗುವಾಗ ಕೇರಳ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ಕೇರಳದಿಂದ ಕರ್ನಾಟಕಕ್ಕೆ ಬರುವವರು ಕರ್ನಾಟಕದ ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಹೇಳಲಾಗಿದೆ. ನೋಂದಣಿಯ ಗುರುತು ಇಲ್ಲದವರಿಗೆ ಬಸ್ ಪ್ರಯಾಣಕ್ಕೆ ಅವಕಾಶ ಇಲ್ಲ ಎನ್ನಲಾಗಿದೆ.
www.ksrtc.in ಮೂಲಕ ಈ ಬಸ್ಗಳಲ್ಲಿ ಮುಂಚಿತವಾಗಿಯೇ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದಾಗಿದೆ.