

ಚನ್ನರಾಯಪಟ್ಟಣ: ತಾಲೂಕಿನ ಬೀರೂರು ಗೇಟ್ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಕೆ.ಆರ್.ಪೇಟೆ ತಾಲೂಕಿನ ಕಾಗೇಪುರ ಗ್ರಾಮದ ಶಿವಕುಮಾರ (46) ಮೃತರು. ಚನ್ನರಾಯಪಟ್ಟಣದಿಂದ ಮುಂಬೈಗೆ ತೆರಳುತ್ತಿದ್ದ ಕಾವೇರಿ ಖಾಸಗಿ ಬಸ್ ಹಾಗೂ ಅರಸೀಕೆರೆ ಕಡೆಯಿಂದ ಬರುತ್ತಿದ್ದ ಆಲ್ಟೊ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಿವಕುಮಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಉಳಿದ ನಾಲ್ವರನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.