

ಬೆಳಗಾವಿ: ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಳಗೊಂಡಿದ್ದು, ಇಂದು ಮತ್ತೊಬ್ಬ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯವೊಂದರಲ್ಲಿ ಈ ಪ್ರಕರಣ ನಡೆದಿದೆ.
ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಇಂದಿರಾನಗರದಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಇತರ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡಿದ್ದ.
ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ವಿದ್ಯಾರ್ಥಿ ಶವವನ್ನು ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದೆ.