

ಮುಂಬೈ: ಏಳು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅನ್ನು ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ ಲಿಮಿಟೆಡ್ (ಒಎನ್ಜಿಸಿ) ಟ್ವೀಟ್ ಮೂಲಕ ತಿಳಿಸಿದೆ.
ಸದ್ಯಕ್ಕೆ ನಾಲ್ವರನ್ನು ರಕ್ಷಿಸಲಾಗಿದ್ದು, ಉಳಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದೆ. ಮುಂಬೈ ವಿಭಾಗದ ಅಧಿಕಾರಿಗಳು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಒಎನ್ಜಿಸಿ ಸಂಸ್ಥೆಯ ಸಿಬ್ಬಂದಿ ಈ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದರು, ಕಾರ್ಯ ನಿಮಿತ್ತ ತೆರಳಿದ್ದರು. ಈ ವೇಳೆ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ತಕ್ಷಣವೇ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ. ಆದರೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. (ಏಜೆನ್ಸೀಸ್)