

ಬೆಂಗಳೂರು: ಅರಣ್ಯ ಇಲಾಖೆಯ ಸಫಾರಿ ಸೇರಿದಂತೆ ಎಲ್ಲ ಹಣ ಸ್ವೀಕೃತಿಗೆ ಆನ್ ಲೈನ್ ಮತ್ತು ಕಂಪ್ಯೂಟರೈಸ್ಡ್ ಬಿಲ್ ನೀಡಲು ತ್ವರಿತವಾಗಿ ಕ್ರಮ ವಹಿಸಲಾಗುತ್ತಿದೆ.
ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆಯನ್ನು ಜಾರಿ ಮಾಡಲು ಇನ್ನೊಂದು ತಿಂಗಳೊಳಗೆ ತಂತ್ರಾಂಶ ಮತ್ತು ವೆಬ್ ಸೈಟ್ ರೂಪಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅರಣ್ಯ ಮತ್ತು ಪಟ್ಟಾ ಭೂಮಿಯಲ್ಲಿ ಮರಗಳ ಅಕ್ರಮ ಕಡಿತಲೆ ಆಗುತ್ತಿರುವ ಬಗ್ಗೆ ಸತತ ದೂರುಗಳು ಬರುತ್ತಿದ್ದು, ನಿರ್ಲಕ್ಷ್ಯ ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಎಚ್ಚರಿಕೆಯನ್ನು ಅರಣ್ಯ ಸಚಿವರು ನೀಡಿದರು. ಕೊಡಗು ಜಿಲ್ಲೆಯ ವೀರಾಜಪೇಟೆಯ ಬಳಿ ಸಾವಿರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂಬ ದೂರಿನ ಕುರಿತಂತೆ ಎ.ಪಿ.ಸಿಸಿ.ಎಫ್. ದರ್ಜೆಯ ಅಧಿಕಾರಿಯಿಂದ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು.