

ಬೆಂಗಳೂರು: ರಾಜ್ಯದಲ್ಲಿ ಇ-ಕಾಮರ್ಸ್ ಜಾಲತಾಣ ಮತ್ತು ಆ್ಯಪ್‌ಗಳಲ್ಲಿ ಆರೋಗ್ಯ ಎಚ್ಚರಿಕೆ ಸಂದೇಶಗಳಿಲ್ಲದ ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅವರು ಸಿಐಡಿ ಸೈಬರ್ ವಿಭಾಗದ ಎಸ್‌ಪಿ ಅವರಿಗೆ ಮನವಿ ಮಾಡಿದ್ದಾರೆ.
ಎಚ್ಚರಿಕೆ ಸಂದೇಶಗಳಿಲ್ಲದ ತಂಬಾಕು ಉತ್ಪನ್ನಗಳ ವ್ಯಾಪಾರ ನಡೆಸುವುದು ‘ಕೋಟ್ಪಾ’ ಕಾಯ್ದೆಯ ಉಲ್ಲಂಘನೆಯಾಗಿದೆ. ಬ್ಲಿಂಕಿಟ್, ಜೊಮ್ಯಾಟೊ, ಸ್ವಿಗ್ಗಿ, ಬಿಗ್‌ಬಾಸ್ಕೆಟ್, ಝೆಪ್ಟೊ ಇತ್ಯಾದಿ ಆ್ಯಪ್‌ಗಳ ಮೂಲಕ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದ್ದು, ಇದರಿಂದ ಅಪ್ರಾಪ್ತ ಮಕ್ಕಳು ವಿಷಕಾರಿ ಕ್ಯಾನ್ಸರ್‌ಕಾರಕ ತಂಬಾಕು ಉತ್ಪನ್ನಗಳಿಗೆ ದಾಸೃಆಗುತ್ತಿದ್ದಾರೆ. ಹೀಗಾಗಿ ಜಾಲತಾಣ ಮತ್ತು ಆ್ಯಪ್‌ಗಳ ಮೇಲೆ ತುರ್ತಾಗಿ ಕಾನೂನು ಕ್ರಮಕೈಗೊಂಡು, ಕೈಗೊಂಡ ಕ್ರಮಗಳ ವರದಿಯನ್ನು ರಾಜ್ಯ ತಂಬಾಕು ನಿಯಂತ್ರಣ ಘಟಕಕ್ಕೆ ಕಳುಹಿಸಬೇಕು ಎಂದು ತಿಳಿಸಿದ್ದಾರೆ.