31ರಂದು ಶಾಲೆಗಳ ಪ್ರಾರಂಭ: ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ

School children without bag 5 MAR 20
30 August 2011, Rajasthan,India: Local girls meeting Mabel van Oranje on a tour of rural Rajasthan, India at Bonli and Hanuta villages meeting with local leaders and village girls to discuss the issue of child marriage. Picture by Graham Crouch/The Elders
Published on

ಬೆಂಗಳೂರು ರಾಜ್ಯಾದ್ಯಂತ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮೇ 29 ಮತ್ತು 30ರಂದು ಶಾಲಾ ಪ್ರಾರಂಭೋತ್ಸವದ ಸಿದ್ಧತೆಗಳನ್ನು ಮಾಡಿಕೊಂಡು ಮೇ 31ರಂದು ಶಾಲಾ ಪ್ರಾರಂಭೋತ್ಸವ ಮಾಡುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ಹಂತದಲ್ಲಿ ಸಿಆರ್‌ಪಿ, ಬಿಆರ್‌ಪಿ ಹಾಗೂ ಶಾಲಾ ಮುಖ್ಯ ಶಿಕ್ಷಕರ ಸಭೆ ನಡೆಸಿ ಶಾಲೆ ಪ್ರಾರಂಭದ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಕ್ರಮ ವಹಿಸುವಂತೆ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

ಶಾಲಾ ಸ್ವಚ್ಛತಾ ಕಾರ್ಯ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು. ತರಗತಿ/ಸಿಬ್ಬಂದಿ ಕೊಠಡಿ, ಶಾಲಾ ಮೈದಾನ, ನೀರಿನ ಟ್ಯಾಂಕ್, ಅಡುಗೆ ಕೋಣೆ, ಆಹಾರ ಧಾನ್ಯಗಳ ಸ್ವಚ್ಛತೆ ಮತ್ತು ಅಡುಗೆ ಪರಿಕರಗಳನ್ನು ಸ್ವಚ್ಛಗೊಳಿಸುವಂತೆ ತಿಳಿಸಿದ್ದಾರೆ.

ಮೇ 29ರಂದು ಶಿಕ್ಷಕರು ವರ್ಷದ ಶೈಕ್ಷಣಿಕ ಚಟುವಟಿಕೆಗಳ ಕುರಿತು ಶಾಲಾ, ತರಗತಿ, ಶಿಕ್ಷಕರ ವೇಳಾಪಟ್ಟಿ, ವಾರ್ಷಿಕ ಕ್ರಿಯಾ ಯೋಜನೆ, ಶಿಕ್ಷಕರು ಪಾಠ ಯೋಜನೆ ತಯಾರಿಸಿಕೊಳ್ಳುವುದು. ಶಾಲಾಭಿವೃದ್ಧಿ ಯೋಜನೆ, ಶಾಲೆ ಬಿಟ್ಟಿರುವ ಮಕ್ಕಳನ್ನು ಗುರುತಿಸಿ ವಿಶೇಷ ದಾಖಲಾತಿ ಮಾಡಿಕೊಳ್ಳಲು ಜಾಥಾ, ಪ್ರಭಾತ್ ಪೇರಿ, ಮನೆ ಭೇಟಿ ಮುಂತಾದ ಕ್ರಮಗಳನ್ನು ಹಮ್ಮಿಕೊಳ್ಳುವುದು.

ಮೇ 31ರಂದು ಮಕ್ಕಳಿಗೆ ಸಿಹಿ ಊಟ ವಿತರಿಸಿ ಪ್ರಾರಂಭೋತ್ಸವ ಮಾಡಬೇಕು. ಶಾಲಾರಂಭದ ದಿನವೇ ಉಚಿತ ಪಠ್ಯಪುಸ್ತಕ ಮತ್ತು ಸಮವಸಗಳನ್ನು ವಿತರಿಸಬೇಕು. ಜೂ.1ರಿಂದ 30ರವರೆಗೆ ಸೇತುಬಂಧ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net