

Operation Sindhura: ಭಾರತ ಹಿಂದೆ ಸರಿದರೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಶಮನ ಮಾಡಲು ಇಸ್ಲಾಮಾಬಾದ್ ಸಿದ್ಧವಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ತಾಣಗಳ ಮೇಲೆ ಭಾರತ ಮಿಲಿಟರಿ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಈ ಹೇಳಿಕೆ ಹೊರ ಬಿದ್ದಿದೆ.
ಭಾರತದ ವಿರುದ್ಧ ದಾಳಿ ನಡೆಸುವ ಎಚ್ಚರಿಕೆ ನೀಡಿದ ಪಾಕಿಸ್ತಾನಿ ಸಚಿವರು, "ಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಪ್ರತಿಕೂಲ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳುತ್ತಿದ್ದೇವೆ. ಆದರೆ, ನಮ್ಮ ಮೇಲೆ ದಾಳಿ ನಡೆದರೆ ನಾವು ಪ್ರತಿಕ್ರಿಯಿಸುತ್ತೇವೆ". ಭಾರತ ಹಿಂದೆ ಸರಿದರೆ, ನಾವು ಖಂಡಿತವಾಗಿಯೂ ಈ ಉದ್ವಿಗ್ನತೆಯನ್ನು ಕೊನೆಗೊಳಿಸುತ್ತೇವೆ ಎಂದಿದ್ದಾರೆ.(ಏಜೆನ್ಸೀಸ್)