

Operation Sindoor: ಕೇಂದ್ರ ಸರ್ಕಾರವು ಆಪರೇಷನ್ ಸಿಂಧೂರ್ ಕುರಿತು ಅಧಿವೇಶನದಲ್ಲಿ ವಿಶೇಷ ಚರ್ಚೆಗಾಗಿ ಜುಲೈ 29 ರಂದು ಲೋಕಸಭೆಯಲ್ಲಿ 16 ಗಂಟೆಗಳು ಮತ್ತು ರಾಜ್ಯಸಭೆಯಲ್ಲಿ 9 ಗಂಟೆಗಳನ್ನು ಮೀಸಲಿಟ್ಟಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಮುಂದಿನ ಪೀಳಿಗೆಗೆ ಆರೋಗ್ಯಯುತ ಜೀವನ
ಲೋಕಸಭೆ ಮತ್ತು ರಾಜ್ಯಸಭೆಯ ವ್ಯವಹಾರ ಸಲಹಾ ಸಮಿತಿ (BAC) ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಅನೇಕ ದಿನಗಳಿಂದ ಆಪರೇಷನ್ ಸಿಂಧೂರ್ ಕುರಿತು ಚರ್ಚೆಗೆ ಒತ್ತಡ ಹೆಚ್ಚುತ್ತಿವೆ, ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆಯೂ ಮುಂಗಾರು ಅಧಿವೇಶನಲ್ಲಿ ವಿರೋಧ ಪಕ್ಷದ ಸಂಸದರು ಸರ್ಕಾರದ ಪ್ರತಿಕ್ರಿಯೆಗಳನ್ನು ನಿರೀಕ್ಷಿಸಿದ್ದಾರೆ.
ಮುಂಗಾರು ಅಧಿವೇಶನದಲ್ಲಿ ಸರ್ಕಾರವು ಈ ವಿಷಯವಾಗಿ ಚರ್ಚೆಗೆ ಸಿದ್ಧವಾಗಿದ್ದು, ಸರ್ಕಾರದ ಪ್ರತಿಕ್ರಿಯೆಯ ರೂಪರೇಷೆಯನ್ನು ಸಿದ್ಧಪಡಿಸಲು ರಕ್ಷಣಾ ಸಚಿವ ಸಿಂಗ್ ಅವರು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಮತ್ತು ಮೂರು ಸೇನಾ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸರಣಿ ಸಭೆಗಳನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇನೆ ಎಂಬ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಯು ಈ ಚರ್ಚೆಯು ಪ್ರಮುಖ ಅಂಶವಾಗಿರಲಿದೆ ಎನ್ನಲಾಗುತ್ತಿದ್ದು, ಪ್ರಧಾನಿ ಮೋದಿಯಿಂದ ಸ್ಪಷ್ಟೀಕರಣ ಕೇಳಲು ಪ್ರತಿಪಕ್ಷಗಳು ಈ ಹೇಳಿಕೆಯನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ:ಕೆಲಸ ಮಾಡುವಾಗಲೇ ಕಾರ್ಮಿಕ ಮೃತ
ಸರ್ವಪಕ್ಷ ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್‌ನಂತಹ ಪ್ರಮುಖ ವಿಷಯಗಳನ್ನು ಚರ್ಚಿಸಲು ನಾವು ಮುಕ್ತರಾಗಿದ್ದೇವೆ. ಸದನದ ಸರಿಯಾದ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮತ್ತು ವಿರೋಧ ಪಕ್ಷದ ನಡುವೆ ಸಮನ್ವಯ ಇರಬೇಕು" ಎಂದರು. (ಏಜೆನ್ಸೀಸ್)