ಆಪರೇಷನ್ ಸಿಂಧೂರ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: CM ಸಿದ್ದರಾಮಯ್ಯ

dk - 2025-05-07T133039.704
Published on

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಸಿಎಂ(CM) ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಕಾಶ್ಮೀರದ ಪಹಲ್ಗಾಂವ್ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ.ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದರು.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net