ನರಭಕ್ಷಕ ಹುಲಿ ಸೆರೆಗೆ ಮುಂದುವರಿದ ಕಾರ್ಯಾಚರಣೆ

30 SARAG 1
ಸರಗೂರು ತಾಲೂಕಿನ ಮುಳ್ಳೂರು ಬೆಣ್ಣೆಗೆರೆ ಗ್ರಾಮದ ಜಮೀನಿನಲ್ಲಿ ಸಾಕಾನೆಗಳ ಮೂಲಕ ಗುರುವಾರ ಕಾರ್ಯಾಚರಣೆ ನಡೆಸಲಾಯಿತು.
Published on

ಸರಗೂರು: ತಾಲೂಕಿನ ಬೆಣ್ಣೆಗೆರೆ ಗ್ರಾಮದ ಜಮೀನಿನಲ್ಲಿ ಗುರುವಾರ ಅರಣ್ಯ ಇಲಾಖೆ ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿಸಿದ್ದು, ಹುಲಿ ಹೆಜ್ಜೆ ಗುರುತಾಗಲಿ, ಹುಲಿಯಾಗಲಿ ಎಲ್ಲೂ ಕಾಣಿಸಿಕೊಂಡಿಲ್ಲ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ನುಗು ವನ್ಯಜೀವಿ ವಲಯದ ಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಣ್ಣೆಗೆರೆ ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆ ಸಾಕಾನೆಗಳಾದ ಮಹೇಂದ್ರ, ಭೀಮ, ರೋಹಿತ್ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿತು. ಆದರೆ ಯಾವುದೇ ಗುರುತು ಮತ್ತು ಹುಲಿ ಸಿಕ್ಕಿಲ್ಲ. ಕಾರ್ಯಾಚರಣೆ ಮುಂದುವರಿದಿದೆ ಎಂದು ನುಗು ವನ್ಯಜೀವಿ ಧಾಮ ಆರ್‌ಎಫ್‌ಒ ವಿವೇಕ್ ತಿಳಿಸಿದ್ದಾರೆ.

ಹುಲಿ ಸೆರೆಗೆ ಬೋನು ಇರಿಸಲಾಗಿದ್ದು, 130ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಬಳಸಿಕೊಳ್ಳಲಾಗಿದೆ. ಸಿಸಿಎಫ್ ಪ್ರಭಾಕರನ್, ಎಸಿಎಫ್ ಡಿ.ಪರಮೇಶ್, ಅರಿವಳಿಕೆ ತಜ್ಞರಾದ ಡಾ.ರಮೇಶ್, ಡಾ.ವಾಸೀಂ ಮಿರ್ಜಾ, ಆರ್‌ಎಫ್‌ಒಗಳಾದ ವಿವೇಕ್, ರಾಜೇಶ್, ಇಲಾಖಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net