ಪುಸ್ತಕ ಬಿಡುಗಡೆ ವಿರೋಧಿಸಿ ಕಪ್ಪು ಪಟ್ಟಿ ಪ್ರದರ್ಶನ, ಪ್ರತಿಭಟನೆ ಬಂಧನ

Protest
Published on


ಕಲಬುರಗಿ : ಆರ್‌ಎಸ್‌ಎಸ್ ಅಂಗ ಸಂಸ್ಥೆಯಾಗಿರುವ ಪ್ರಜ್ಞಾ ಪ್ರವಾಹವು ಅಖಿಲ ಭಾರತ ಸಾಹಿತ್ಯ ಪರಿಷತ್ ಸಹಯೋಗದಡಿ ನಗರದ ಬಸವರಾಜಪ್ಪ ಅಪ್ಪ ಸಭಾಂಗಣದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ `ವಚನ ದರ್ಶನ' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮತ್ತು ಸಮಾರಂಭದ ಹೊರಗಡೆ ಮುಖ್ಯರಸ್ತೆಯಲ್ಲಿ ಪುಸ್ತಕ ಬಿಡುಗಡೆ ವಿರೋಧಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ ಘಟನೆ ನಡೆದವು.
ಸಮಾರಂಭದ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆಯಾಗುತ್ತಲೇ ವಿರೋಧಿಸಿ, ಧ್ವನಿ ಸಂಘದ ವಿರುದ್ಧ ಘೋಷಣೆಗಳನ್ನು ಕೂಗಿದವರನ್ನು ಕೂಡಲೇ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡು ಹೊರ ಕರೆದುಕೊಂಡು ಬಂದು ಪೊಲೀಸ್ ವಾಹನದಲ್ಲಿ ಕುಳ್ಳಿರಿಸಿಕೊಂಡು ಹೋದರು.
ವಚನ ದರ್ಶನ ಪುಸ್ತಕ ಬಿಡುಗಡೆ ವಿರೋಧಿಸಿ ಜಾಗತಿಕ ಲಿಂಗಾಯತ ಮಹಾಸಭಾ, ಪ್ರಗತಿಪರರಿಂದ ಸಮಾರಂಭ ನಡೆಯುತ್ತಿದ್ದ ಬಸವರಾಜಪ್ಪ ಅಪ್ಪ ಸಭಾಂಗಣದ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ನಂತರ ಪುಸ್ತಕ ಬಿಡುಗಡೆ ವೇಳೆಯೇ ಸಭಾಂಗಣದಲ್ಲಿ ಕುಳಿತ್ತಿದ್ದ ಕೆಲವರು, ಕಪ್ಪು ಪಟ್ಟಿ ಪ್ರದರ್ಶಿಸಿ ಧಿಕ್ಕಾರ ಕೂಗಿದರು. ಪ್ರತಿರೋಧ ವ್ಯಕ್ತಪಡಿಸಿದವರನ್ನು ಪೊಲೀಸರು ಹೊರಗೆ ಕರೆದ್ಯೊಯ್ದರು. ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಸಮಾರಂಭ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net