ಆಕ್ಷೇಪಣೆ ಸಲ್ಲಿಸಲು ಅವಕಾಶ

Published on

ಪಿರಿಯಾಪಟ್ಟಣ: ತಾಲೂಕಿನ ವಿವಿಧೆಡೆ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿಡಿಪಿಒ ಕಚೇರಿ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು ಯಾವುದೇ ಆಕ್ಷೇಪಣೆ ಇದ್ದಲ್ಲಿ ಆ.28 ರ ಒಳಗೆ ಪಿರಿಯಾಪಟ್ಟಣ ತಾಲೂಕು ಸಿಡಿಪಿಒ ಕಚೇರಿಗೆ ನೀಡುವಂತೆ ಸಿಡಿಪಿಒ ವೀಣಾ ಕೋರಿದ್ದಾರೆ.

ತಾಲೂಕು ವ್ಯಾಪ್ತಿಯಲ್ಲಿ ಸಂದರ್ಭನುಸಾರ ಖಾಲಿಯಿದ್ದ 5 ಅಂಗನವಾಡಿ ಕಾರ್ಯಕರ್ತೆ, 6 ಮಿನಿ ಅಂಗನವಾಡಿ ಕಾರ್ಯಕರ್ತೆ, 57 ಅಂಗನವಾಡಿ ಸಹಾಯಕಿಯರ ಆಯ್ಕೆ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪಿರಿಯಾಪಟ್ಟಣ ಸಿಡಿಪಿಒ ಕಚೇರಿ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿ ಬಗ್ಗೆ ಅಭ್ಯರ್ಥಿಗಳಿಂದ ಯಾವುದೇ ಆಕ್ಷೇಪಣೆ ಇದ್ದಲ್ಲಿ ಖುದ್ದಾಗಿ ಅಥವಾ ಲಿಖಿತವಾಗಿ ಅಗತ್ಯ ಸಮರ್ಥನಿಯ ದಾಖಲೆಗಳೊಂದಿಗೆ ಆ.28 ರ ಸಂಜೆ 5.30 ಗಂಟೆಯೊಳಗೆ ಪಿರಿಯಾಪಟ್ಟಣ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ನೀಡಬಹುದು. ತದನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net