ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧ

jctu
ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರು ಪ್ರತಿಭಟನೆ ನಡೆಸಿದರು. ಲಕ್ಷ್ಮೀನಾರಾಯಣ, ಪ್ರಭಾಕರ್, ಬಂಗಾರಪ್ಪ, ಲಿಂಗೋಜಿರಾವ್, ಕುಮಾರಸ್ವಾಮಿ, ಹನುಮಮ್ಮ, ಮುನಿರಾಜು ಇತರರಿದ್ದರು.
Published on

ಶಿವಮೊಗ್ಗ: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಖಾಸಗೀಕರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರು ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷ ಸಮೀಪಿಸುತ್ತಿದೆ. ಈ ಅವಧಿಯಲ್ಲಿ ಕಾರ್ಮಿಕರು, ರೈತರು, ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಬೆಲೆ ಏರಿಕೆಯಿಂದ ಜನರ ಬದುಕು ದುಸ್ತರವಾಗಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ಕಡಿಮೆ ಬೆಲೆಗೆ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಖಂಡನೀಯ. ಇನ್ನೊಂದೆಡೆ ಖಾಸಗಿ ಕಂಪನಿಗಳೂ ದೊಡ್ಡ ಪ್ರಮಾಣದಲ್ಲಿ ನೌಕರರನ್ನು ವಜಾಗೊಳಿಸುತ್ತಿವೆ. ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸಿಕೊಂಡು ಸೂಕ್ತ ಸೌಲಭ್ಯ ನೀಡದೆ ವಂಚಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿಯಿವೆ. ಸೂಕ್ತ ಸಮಯದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಉದ್ಯೋಗ ಸಮಸ್ಯೆ ಕಾಡುತ್ತಿದೆ. ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಅಭಿವೃದ್ಧಿಪಡಿಸುವ ಬದಲು ಮಾರಾಟ ಮಾಡುವ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಮುಖಂಡರಾದ ಲಿಂಗೋಜಿರಾವ್, ಕುಮಾರಸ್ವಾಮಿ, ಬಂಗಾರಪ್ಪ, ಹನುಮಮ್ಮ, ಲಕ್ಷ್ಮೀನಾರಾಯಣ, ಪ್ರಭಾಕರ್, ಮುನಿರಾಜು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net