ಗುತ್ತಿಗೆಯಲ್ಲಿ ಮೀಸಲಾತಿ ಹಂಚಿಕೆಗೆ ವಿರೋಧ

klr bjp protest
ಕೋಲಾರ ತಾಲೂಕು ಕಚೇರಿ ಎದುರು ಮಂಗಳವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on

ಕೋಲಾರ: ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಬಿಜೆಪಿ ಕಾರ್ಯಕರ್ತರು ಇಲ್ಲಿನ ತಾಲೂಕು ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್​ ಸರ್ಕಾರವು ಒಂದು ಧರ್ಮವನ್ನು ಓಲೈಕೆ ರಾಜಕಾರಣ ಮಾಡುತ್ತಿದೆ. ಬಹುಸಂಖ್ಯಾತರ ಹಿಂದುಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯವನ್ನು ನಿರ್ವಹಣೆ ಮಾಡುವುದು ಬಹಳ ಸಂಕಷ್ಟದಲ್ಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಮಾಡಬೇಕಿರುವ ಕೋಟ್ಯಂತರ ರೂ. ಅನುದಾನವನ್ನು ಬಾಕಿ ಉಳಿಸಿಕೊಂಡಿದೆ. ಇದರಿಂದಾಗಿ ಕೆಲಸ ಮಾಡಿರುವ ಗುತ್ತಿಗೆದಾರರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಮಧ್ಯೆ ಮುಸ್ಲಿಂ ಸಮುದಾಯದವರಿಗೆ ಮೀಸಲಾತಿ ಹಂಚಿಕೆ ಮಾಡುವ ಅವಯಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.

ಸುಪ್ರೀಂ ಕೋರ್ಟ್​ ಸಹ ಧಮಾರ್ಧಾರಿತ ಮೀಸಲಾತಿ ರದ್ದುಗೊಳಿಸಿ, ಮೀಸಲಾತಿ ಪ್ರಯೋಜನಗಳಿಗಾಗಿ 77 ಸಮುದಾಯಗಳನ್ನು ಒಬಿಸಿ ಎಂದು ವರ್ಗೀಕರಿಸುವ ಪಶ್ಚಿ ಬಂಗಾಳ ಸಕಾರದ ನಿರ್ಧಾರವನ್ನು ರದ್ದುಗೊಳಿಸಿದೆ. ಆದ್ದರಿಂದ ಧಮಾರ್ಧಾರಿತ ಮೀಸಲಾತಿ ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುವುದರಿಂದ ಯಾವುದೇ ಕಲ್ಯಾಣ ಉದ್ದೇಶವಿಲ್ಲದ ಅಸಂವಿಧಾನಿಕ ನೀತಿಯ ಮಸೂದೆಗಗೆ ಒಪ್ಪಿಗೆ ನೀಡಬಾರದು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಮುಸ್ಲಿಮಗೆ ಇಂತಹ ನಾಗರಿಕ ಸೇವೆಯಲ್ಲಿ ಮೀಸಲಾತಿ ನೀಡುವ ಮೂಲಕ ರಾಷ್ಟ್ರೀಯ ಏಕತೆ, ಸಮಗ್ರತೆ, ಸಾರ್ವಭೌಮತೆಗೆ ರಾಜ್ಯದ ಕಾಂಗ್ರೆಸ್​ ಸರ್ಕಾರ ಅಪಾಯವನ್ನುಂಟು ಮಾಡಿದೆ. ಈ ನಿಟ್ಟಿನಲ್ಲಿ ಮಸೂದೆಯನ್ನು ಅನುಮೋದಿಸಬಾರದು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಬೇಕು, ಕೋಮುಭಾವನೆ ಪ್ರಚೋದಿಸುತ್ತಿರುವ ಕಾಂಗ್ರೆಸ್​ನ ತುಷ್ಟೀಕರಣ ನೀತಿ ಬದಲಾಗಬೇಕು, ಸೌಹಾರ್ದತೆ ನೆಲಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಜರಂಗದಳ ಬಾಲಾಜಿ, ಬಾಬು, ಅಪ್ಪಿ, ವಿಶ್ವನಾಥ್​, ಶ್ರೀಧರ್​, ಮುಖಂಡರಾದ ಮಂಜುನಾಥ್​, ಸಾಮಾ ಬಾಬು, ನಾಮಾಲ ಮಂಜು, ಬಾಲಾಜಿ, ಓಂಪ್ರಕಾಶ್​, ಸಾಯಿಮೌಳಿ, ಸಾಯಿಸುಮಮನ್​, ಕೆಂಬೋಡಿ ನಾರಾಯಣಸ್ವಾಮಿ, ವಿನಯ್​, ವಿಶ್ವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net