ಈ ಫೋಟೋದಲ್ಲಿರುವ ಹಿಮಚಿರತೆ ಪತ್ತೆಹಚ್ಚುವಲ್ಲಿ ಶೇ. 99 ಮಂದಿ ವಿಫಲ! ಸಾಧ್ಯವಾದ್ರೆ ನೀವು ಪತ್ತೆಹಚ್ಚಿ

Spot the Snow leopard
Published on

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೃಷ್ಟಿ ಭ್ರಮೆ ಎಂದರೇನು?

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

Spot the Snow leopard 1

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಬೃಹತ್​​ ಕಲ್ಲು ಬಂಡೆಯ ಪ್ರದೇಶವನ್ನು ಕಾಣಬಹುದು. ಕಲ್ಲು ಬಂಡೆಯ ಒಂದು ಭಾಗದಲ್ಲಿ ಹಿಮ ಚಿರತೆಯೊಂದು ನಿಂತಿದೆ. ಅದು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಏಕೆಂದರೆ, ಕಲ್ಲುಬಂಡೆಯ ಬಣ್ಣಕ್ಕೂ ಹಿಮಚಿರತೆಯ ಬಣ್ಣಕ್ಕೂ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿದ್ದು, ನೋಡುಗರಲ್ಲಿ ಗೊಂದಲ ಸೃಷ್ಟಿಸುತ್ತದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಹಿಮಚಿರತೆ ಕಾಣಿಸುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಹಿಮಚಿರತೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಹಿಮಚಿರತೆಯನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹಿಮಚಿರತೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

Spot the Snow leopard 2
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net