ನಿಮ್ಮ ಕಣ್ಣಿಗೊಂದು ಸವಾಲ್​: ಎರಡರಲ್ಲಿ ಯಾವ ಝೀಬ್ರಾಗೆ ಸೇರಿದ ತಲೆ ಎಂಬುದನ್ನು ಗೆಸ್​ ಮಾಡುವಿರಾ?

Zebra
Published on

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೃಷ್ಟಿ ಭ್ರಮೆ ಎಂದರೇನು?

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

ಮೋಜಿನ ಮಾರ್ಗ

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

Zebra 1

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಎರಡು ಝೀಬ್ರಾ ಎದುರು-ಬದುರು ನಿಂತಿರುವುದನ್ನು ಕಾಣಬಹುದು. ಆದರೆ, ಇಲ್ಲೊಂದು ಗೊಂದಲವಿದೆ. ಅದೇನೆಂದರೆ, ಎರಡು ಝೀಬ್ರಾ ಇದ್ದರು ಕಾಣುತ್ತಿರುವುದು ಮಾತ್ರ ಒಂದೇ ತಲೆ. ಆದರೆ, ಆ ತಲೆ ಯಾವ ಝೀಬ್ರಾಗೆ ಸೇರಿದ್ದು ಎಂಬದುನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಎರಡೂ ಝೀಬ್ರಾ ಒಂದೇ ರೀತಿ ಇರುವುದರಿಂದ ತಲೆ ಯಾವ ಝೀಬ್ರಾಗೆ ಸೇರಿದ್ದು ಎಂಬುದನ್ನು ಹೇಳಲು ಕಷ್ಟವಾಗುತ್ತದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಕಂಡುಹಿಡಿಯಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ತಲೆಯು ಎರಡರಲ್ಲಿ ಯಾವ ಝೀಬ್ರಾಗೆ ಸೇರಿದ್ದು ಎಂಬುದುನ್ನು ಪತ್ತೆಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಯಾವ ಝೀಬ್ರಾಗೆ ಸೇರಿದ ತಲೆ ಎಂದು ಗುರುತಿಸಿದ್ದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಗುರುತಿಸಲು ಸಾಧ್ಯವಾಗದೇ, ಇನ್ನೂ ಗೊಂದಲದಲ್ಲಿದ್ದರೆ, ಉತ್ತರ ನಾವು ಹೇಳುತ್ತೇವೆ ಮುಂದೆ ಓದಿ.

ಅಂದಹಾಗೆ ತಲೆಯು ಎಡಗಡೆ ಇರುವ ಝೀಬ್ರಾಗೆ ಸೇರಿದ್ದಾಗಿದೆ. ಇದನ್ನು ಸ್ವತಃ ಛಾಯಾಗ್ರಾಹಕ ಸರೋಶ್ ಲೋಧಿ ಸ್ಪಷ್ಟನೆ ನೀಡಿದ್ದಾರೆ. ಈ ಫೋಟೋವನ್ನು ಅವರು 2020ರ ಜುಲೈ 7ರಂದು ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದರು. ಈ ಫೋಟೋವನ್ನು ಆಫ್ರಿಕಾದ ಮಸೈಮಾರಾ ಕಾಡಿನಲ್ಲಿ ಸರೋಶ್ ಲೋಧಿ ಕ್ಲಿಕ್ಕಿಸಿದರು. ನೋಡುಗರಿಗೆ ಈ ಫೋಟೋ ಗೊಂದಲ ಉಂಟು ಮಾಡುವುದರಲ್ಲಿ ಸಂಶಯವೇ ಇಲ್ಲ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net