

Optical Illusion : ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion) ಎಂದು ಕರೆಯುತ್ತೇವೆ.
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ಹುಲ್ಲಿನಿಂದ ಆವೃತವಾಗಿರುವ ಅರಣ್ಯ ಪ್ರದೇಶವನ್ನು ನೋಡಬಹುದು. ಅಲ್ಲಿ ಮೂರು ಜಿಂಕೆಗಳು ನಿಂತಿವೆ. ಜಿಂಕೆಗಳನ್ನು ಬೇಟೆಯಾಡಲು ಚೀತಾವೊಂದು ಹುಲ್ಲುಗಳ ನಡುವೆ ಹೊಂಚು ಹಾಕಿ ಕುಳಿತಿದೆ. ಆ ಚೀತಾ ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಏಕೆಂದರೆ, ಹುಲ್ಲಿನ ಬಣ್ಣಕ್ಕೂ ಚೀತಾ ಬಣ್ಣಕ್ಕೂ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿದ್ದು, ನೋಡುಗರಲ್ಲಿ ಗೊಂದಲ ಸೃಷ್ಟಿಸುತ್ತದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಚೀತಾ ಕಾಣಿಸುತ್ತದೆ.
ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಚೀತಾವನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.