ಈ ಫೋಟೋದಲ್ಲಿರುವ 3ನೇ ಸಿಂಹವನ್ನು ಪತ್ತೆಹಚ್ಚುವಲ್ಲಿ ಶೇ. 99 ಮಂದಿ ವಿಫಲ! ಸಾಧ್ಯವಾದ್ರೆ ಪತ್ತೆಹಚ್ಚಿ…

Spot the Lion 1
Published on

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media)ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೃಷ್ಟಿಭ್ರಮ ಎಂದರೇನು?

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

ಮೋಜಿನ ಮಾರ್ಗ

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ...

Spot the Lion 2

ಸದ್ಯ ವೈರಲ್​​​​ ಆಗಿರುವ ಫೋಟೋದಲ್ಲಿ ಎರಡು ಸಿಂಹಗಳು ಕೊಳವೊಂದರಲ್ಲಿ ನೀರು ಕುಡಿಯುತ್ತಿರುವುದನ್ನು ಕಾಣಬಹುದು. ಅಲ್ಲಿ ಕಣ್ಣಿಗೆ ಕಾಣುವುದು ಎರಡು ಸಿಂಹ ಮಾತ್ರ. ಆದರೆ, ಅಲ್ಲಿ ಮೂರನೇ ಸಿಂಹವು ಕೂಡ ಇದೆ. ಅದು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಸ್ವಲ್ಪ ತಲೆಗೆ ಕೆಲಸ ಕೊಡಬೇಕಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಸಿಂಹವನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಸಿಂಹವನ್ನು ಪತ್ತೆಹಚ್ಚಿದ್ದರೆ, ನಿಮಗೆ ನೀವೇ ಸಾಟಿ. ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಸಿಂಹವನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

Spot the Lion 3
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net