ಬುದ್ಧಿಗೊಂದು ಗುದ್ದು​! ಈ ಕೈಬರಹದಲ್ಲಿರುವ ತಪ್ಪನ್ನು ಗುರುತಿಸಿದರೆ ನೀವೇ ಜೀನಿಯಸ್​

Find the Mistakes
Published on

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಮತ್ತು ವಸ್ತುಗಳು ಅಥವಾ ಇನ್ಯಾವುದನ್ನೋ ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಈ ಆಪ್ಟಿಕಲ್ ಇಲ್ಯೂಷನ್​ಗಳು ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಕೈ ಬರಹದಲ್ಲಿ ಎ ಯಿಂದ ಝಡ್​ ವರೆಗಿನ ಇಂಗ್ಲಿಷ್​ ವರ್ಣಮಾಲೆ ಬರೆದಿರುವುದನ್ನು ಕಾಣಬಹುದು. ವರ್ಣಮಾಲೆಯ ಮೇಲೆ ತಪ್ಪು ಏನಿದೆ? (What is Wrong) ಎಂದು ಬರೆಯಲಾಗಿದೆ. ವರ್ಣಮಾಲೆಯ ಕೆಳಗಡೆ ನೀವು ಶಾಂತವಾಗಿರುತ್ತೀರ, ಹಾಗಾದರೆ ತಪ್ಪನ್ನು ಕಂಡುಹಿಡಿಯುವುದು ಸುಲಭ (The Calmer you are, the easier it is to fnid the mistake) ಎಂದು ಇಂಗ್ಲಿಷ್​ನಲ್ಲಿ ಬರೆಯಲಾಗಿದೆ. ಇಡೀ ಬರವಣಿಗೆಯಲ್ಲಿ ಏನು ತಪ್ಪಾಗಿದೆ ಪತ್ತೆ ಹಚ್ಚಿ ಎಂದು ಹೇಳಲಾಗಿದೆ. ಆದರೆ, ಆ ತಪ್ಪು ಏನು ಎಂಬುದು ಅಷ್ಟು ಸುಲಭವಾಗಿ ಕಾಣುವುದಿಲ್ಲ. ಆದರೆ, ಸೂಕ್ಷ್ಮವಾಗಿ ಮತ್ತು ತಾಳ್ಮೆಯಿಂದ ನೋಡಿದರೆ ಫೋಟೋದಲ್ಲಿರುವ ತಪ್ಪನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ತಪ್ಪು ಯಾವುದು ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ತಪ್ಪು ಏನೆಂದು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ತಪ್ಪು ಏನು ಎಂಬುದು ನಿಮಗೆ ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.

Find the Mistakes 2

ಅಂದಹಾಗೆ ಆ ತಪ್ಪು ಏನೆಂದರೆ Find ಎಂಬ ಪದವೇ ತಪ್ಪು. ಕೈಬರಹದಲ್ಲಿ Fnid ಎಂದು ಬರೆಯಲಾಗಿದೆ. ಇದು ತಪ್ಪು. ಆದರೆ, ನಮ್ಮ ಗಮನವೆಲ್ಲ ಎಬಿಸಿಡಿ ಮೇಲೆ ಇರುತ್ತದೆ. ಕೆಳಗಿನ ಪದಗಳನ್ನು ಅಷ್ಟಾಗಿ ಗಮನಿಸುವುದೇ ಇಲ್ಲ. ಹೀಗಾಗಿ ಪತ್ತೆ ಹಚ್ಚುವಲ್ಲಿ ತುಸು ಗೊಂದಲಕ್ಕೀಡಾಗುವುದು ಸಹಜ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net