ಅತಿಥಿ ಉಪನ್ಯಾಸಕರಿಗೆ ಗುಡ್​ ನ್ಯೂಸ್​; ಇನ್ನೊಂದು ವರ್ಷ ನಿಮಗೇನು ತೊಂದರೆಯಿಲ್ಲ

gue
Published on

ಬೆಂಗಳೂರು: ಕರೊನಾ ತಂದಿಟ್ಟಿರುವ ಆರ್ಥಿಕ ಸಂಕಷ್ಟದಿಂದ ಕೆಂಗಟ್ಟಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಗುಡ್​ ನ್ಯೂಸ್​ ಕೊಟ್ಟಿದೆ. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸೇವೆಯನ್ನು ಒಂದು ವರ್ಷದ ಮಟ್ಟಿಗೆ ಮುಂದುವರಿಸಿರುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.

ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಪ್ರತಿಯೊಬ್ಬ ಅತಿಥಿ ಉಪನ್ಯಾಸಕರ ಸೇವೆಯ ಅವಧಿಯನ್ನು ಮುಂದುವರಿಸಲಾಗಿದೆ. ಕೋವಿಡ್‌-19 ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅಗತ್ಯ. ಅದೇ ಕಾರಣದಿಂದಾಗಿ ಅವರ ಸೇವೆಯನ್ನು ಇನ್ನು ಒಂದು ವರ್ಷದ ಅವಧಿಗೆ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net