ರಕ್ತದಾನ ಶಿಬಿರಗಳ ಆಯೋಜನೆ ಅಗತ್ಯ

blood donation
ಮೆಗ್ಗಾನ್ ಆಸ್ಪತ್ರೆಯಲ್ಲಿ ಶುಶ್ರೂಷಾಧಿಕಾರಿಗಳ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಡಾ. ಸಿದ್ದನಗೌಡ ಪಾಟೀಲ್, ಡಾ. ತಿಮ್ಮಪ್ಪ, ಅನ್ನಪೂರ್ಣ, ರಿಯಾಜ್ ಅಹಮ್ಮದ್ ಇದ್ದರು.
Published on

ಶಿವಮೊಗ್ಗ: ಜಿಲ್ಲೆಯಲ್ಲಿ ರಕ್ತದ ಬೇಡಿಕೆ ಹೆಚ್ಚಿದೆ. ಅದೇ ಸಂದರ್ಭದಲ್ಲಿ ದಾನಿಗಳ ಕೊರತೆಯೂ ಕಾಡುತ್ತಿದೆ. ಹೀಗಾಗಿ ಸಂಘ ಸಂಸ್ಥೆಗಳು ಹೆಚ್ಚಿನ ಸಹಕಾರ ನೀಡಿ ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್ ಹೇಳಿದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಶುಶ್ರೂಷಾಧಿಕಾರಿಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಬೋಧನಾ ಆಸ್ಪತ್ರೆಯಲ್ಲಿ ಸೋಮವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರತಿ ದಿನ ಮೆಗ್ಗಾನ್ ಆಸ್ಪತ್ರೆಯಲ್ಲೇ 100 ಯೂನಿಟ್ ರಕ್ತದ ಅವಶ್ಯಕತೆಯಿದೆ ಎಂದು ತಿಳಿಸಿದರು.
ರಕ್ತದಾನಿಗಳ ಕೊರತೆಯಿಂದ ರಕ್ತದ ಅಭಾವ ಉಂಟಾಗಿದೆ. ತುರ್ತು ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಪ್ರಾಣಹಾನಿ ಸಂಭವಿಸುವ ಅಪಾಯ ಇದೆ. ಕಾಲೇಜುಗಳಿಗೆ ರಜೆ ಇರುವುದರಿಂದ ಶಿಬಿರ ಆಯೋಜನೆ ಸಾಧ್ಯವಾಗುತ್ತಿಲ್ಲ. ಯುವಜನರು ರಕ್ತದಾನಕ್ಕೆ ಮುಂದಾಗಬೇಕು ಎಂದರು.
ಸಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ, ಶುಶ್ರೂಷಕ ಅಧೀಕ್ಷಕಿ ಅನ್ನಪೂರ್ಣ, ಆಸ್ಪತ್ರೆ ಕಚೇರಿ ಅಧೀಕ್ಷಕ ರಿಯಾಜ್ ಅಹಮ್ಮದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net