ಸೋಲಿನ ಆತ್ಮಾವಲೋಕನದೊಂದಿಗೆ ಪಕ್ಷ ಸಂಘಟಿಸಿ

congres
ಕೋಲಾರದ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಸತ್ಯ ಶೋಧನ ಸಮಿತಿ ಸದಸ್ಯ ವಿಜಯ ಕುಮಾರ ಸೊರಕ್ಕೆ ಮಾತನಾಡಿದರು. ಕೆಪಿಸಿಸಿ ಒಬಿಸಿ ಘಟಕದ ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಜಿಲ್ಲಾ ಉಸ್ತುವಾರಿ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಎಲ್.ಎ.ಮಂಜುನಾಥ್ ಇದ್ದರು.
Published on

ಕೋಲಾರ: ಲೋಕಸಭೆ ಸೇರಿ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲಲು ಕಾರಣವೇನು ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಮುಂದಿನ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ತಳಮಟ್ಟದಿಂದ ಪಕ್ಷ ಸಂಘಟನೆಗೆ ವಿವಿಧ ಘಟಕಗಳ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಸತ್ಯ ಶೋಧನ ಸಮಿತಿ ಸದಸ್ಯ ಹಾಗೂ ಮಾಜಿ ಸಂಸದ ವಿನಯಕುಮಾರ್ ಸೊರಕೆ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಅಭ್ಯರ್ಥಿಗಳು ಸೋಲಲು ಕಾರಣವೇನು ಎಂಬುದರ ಬಗ್ಗೆ ತಿಳಿಯಲು ಕೆಪಿಸಿಸಿಯು ಸತ್ಯ ಶೋಧನ ಸಮಿತಿ ರಚನೆ ಮಾಡಿದ್ದು, ವರದಿ ತಯಾರಿಸಿ ಕೆಪಿಸಿಸಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲುಂಟಾಗಲು ಕಾರಣವೇನು ಎಂಬುದನ್ನು ತಿಳಿಯಬೇಕು. ಜಿಲ್ಲಾ ಕಾಂಗ್ರೆಸ್ ಸಮಿತಿ, ಬ್ಲಾಕ್ ಕಾಂಗ್ರೆಸ್, ವಿವಿಧ ಘಟಕಗಳ ಸಮಿತಿಯ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಮುಂಬರಲಿರುವ ಚುನಾವಣೆಗಳಿಗೆ ಪಕ್ಷವನ್ನು ಯಾವ ರೀತಿ ಸಂಘಟಿಸಬೇಕು. ಕಾರ್ಯಕರ್ತರು, ಮುಖಂಡರ ನಡುವೆ ಗೊಂದಲಗಳು, ಭಿನ್ನಾಭಿಪ್ರಾಯ ಇದ್ದಲ್ಲಿ ಅದನ್ನು ಯಾವ ರೀತಿ ಬಗೆಹರಿಸಲು ಕ್ರಮವಹಿಸಲಾಗುವುದು ಎಂದರು.
ಯಾವ ಕ್ಷೇತ್ರದಲ್ಲಿ ಯಾವ ಕಾರಣಕ್ಕೆ ಸೋಲುಂಟಾಯಿತು, ಅಲ್ಲಿನ ನ್ಯೂನತೆಗಳೇನು.?, ಅದನ್ನು ಹೇಗೆ ಸರಿಪಡಿಸಬಹುದಾಗಿದೆ ಎಂದು ಯೋಚಿಸಬೇಕು. ಹಲವಾರು ಕ್ಷೇತ್ರಗಳಲ್ಲಿ ಗೆದ್ದಿರುವ ಶಾಸಕರೂ ಇದ್ದಾರೆ, ಸರ್ಕಾರದ ಸೌಲಭ್ಯಗಳು ಜನತೆಗೆ ಸಮರ್ಪಕವಾಗಿ ತಲುಪಿದೆಯೇ ಇಲ್ಲವೇ ಎಂಬುದನ್ನು ಅರಿಯಬೇಕು. ಆ ಮೂಲಕ ಪಕ್ಷದ ಸಾಧನೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರೆ ಚುನಾವಣೆಗಳಲ್ಲಿ ಗೆಲುವು ಸಾಧಿಸಬಹುದು ಎಂದರು.
ಸಮಿತಿಯ ಸದಸ್ಯ ಧರ್ಮಸೇನಾ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಗ್ರಾಮಾಂತರ ಅಧ್ಯಕ್ಷ ಉದಯ್ ಶಂಕರ್, ಎಸ್ಸಿ ಘಟಕ ಅಧ್ಯಕ್ಷ ಜಯದೇವ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರತ್ನಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net