ನಮ್ಮ ಸರ್ಕಾರ ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ; ಸಿದ್ದರಾಮಯ್ಯ

Siddaramaiah
Published on

ಬೆಂಗಳೂರು: ಬಿಜೆಪಿಯವರು ಹೇಳಿದ ತಕ್ಷಣ ನಮ್ಮ ಸರ್ಕಾರ ಬಿದ್ದು ಹೋಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಸರ್ಕಾರವನ್ನು ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಜ್ಯದಲ್ಲಿ ನಮ್ಮ ಸರ್ಕಾರ ಸುಭದ್ರವಾಗಿದೆ. ಸರ್ಕಾರ ಏಕೆ ಉರುಳುತ್ತದೆ? ಎಂದು ಕೇಳಿದರು.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾದ ರೀತಿಯಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಈ ಪ್ರತಿಕ್ರಿಯೆ ನೀಡಿದರು.

ನಮ್ಮ ಸರ್ಕಾರವನ್ನು ಯಾರಿಂದಲೂ ಪತನ ಮಾಡಲು ಆಗುವದಿಲ್ಲ. ಬಿಜೆಪಿ ನಾಯಕರೊಬ್ಬರು ಹೇಳಿದ ಮಾತ್ರಕ್ಕೆ ಸರ್ಕಾರ ಉರುಳುತ್ತದೆಯೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net