ನಮ್ಮ ಸರ್ಕಾರ ಸಂವಿಧಾನ ರಕ್ಷಿಸುವ ಕೆಲಸ ಮಾಡುತ್ತದೆ: ಸಿಎಂ|Our government works to protect the constitution

cmmmm
Published on

ಬೆಂಗಳೂರು: ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಸಂವಿಧಾನ ರಕ್ಷಿಸುವ ಕಾರ್ಯ ಮಾಡುತ್ತಿದೆ(Our government works to protect the constitution) ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹೇಳಿದರು.

ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿದಾನಸೌಧದ ಎದುರು ಆಯೋಜಿಸಿದ್ದ ಕಾಲ್ನಡಿಗೆ ಜಾಥಾ ಉದ್ಘಾಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂವಿಧಾನವನ್ನು ತಿದ್ದುಪಡಿ ಬಗ್ಗೆ ಸಂವಿಧಾನಕ್ಕೆ ವಿರೋಧವಾಗಿರುವವರು ಹೇಳಿಕೆಗಳನ್ನು ನೀಡುತ್ತಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳೂ ಸಹ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು ಎಂದರು.

ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳು ಸಂವಿಧಾನದಂತೆ ನಡೆದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತೆ ಕೆಲಸ ಮಾಡಬೇಕು. ಆದ್ದರಿಂದ ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿ, ಅದರ ಆಶಯಗಳನ್ನು ವಿದ್ಯಾರ್ಥಿಗಳು ಮನನ ಮಾಡಿಕೊಳ್ಳಬೇಕೆಂಬುದು ನಮ್ಮ ಉದ್ದೇಶ ಎಂದರು.

ಇದಕ್ಕೂ ಮೊದಲು ವಿಧಾನಸೌಧದ ಎದುರಿಗೆ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ವಂದಿಸಿದರು.

ಸಚಿವರಾದ ಎಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಮತ್ತು ಶಾಸಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net