ಮೆಟ್ರೋ ಪ್ರಯಾಣದರ ಇಳಿಸಬೇಕೆಂಬ ಅಭಿಪ್ರಾಯ ನಮ್ಮದು, ಅಂತಿಮ ತೀರ್ಮಾನ ಕೇಂದ್ರದ್ದು: DK ಶಿವಕುಮಾರ್

dk - 2025-02-13T131540.950
Published on

ಬೆಂಗಳೂರು: ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್​ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು ಎಂದು ಡಿಸಿಎಂ DK ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧ ಆವರಣದಲ್ಲಿ ಸುದ್ದಿಗಾರರ ಜತೆ ಗುರುವಾರ ಮಾತನಾಡಿದರು. ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ ಎಂದರು.

ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net