

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ದೀರ್ಘಾವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಬದಲಿಸಲು ಸೂಚಿಸಲಾಗಿದೆ.
ಕರ್ನಾಟಕ ಸರ್ಕಾರ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ಅವರ ಮನವಿ ಪತ್ರದ ಮೇಲೆ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್ ಟಿಪ್ಪಣಿ ಹೊರಡಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 3ವರ್ಷಗಳಿಗಿಂತಲೂ ಅಧಿಕ ಸಮಯದಿಂದ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನು ಈ ಕೂಡಲೇ ಹಿಂದಿರುಗಿಸಿ ಆವರ ಬದಲಿಗೆ ಸಂಬಂಧಪಟ್ಟ ಇಲಾಖೆ/ನಿಗಮ/ಮಂಡಳಿ ಸಂಘ-ಸಂಸ್ಥೆಗಳಿಂದ ಬೇರೊಬ್ಬರನ್ನು ಚಲನವಲನಗೊಳಿಸಲು ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮದ ಬಗ್ಗೆ ಮಾಹಿತಿಯನ್ನು ಏಳು ದಿನಗಳೊಳಗಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಮೇಜರ್ ಮಣಿವಣ್ಣನ್ ಎಚ್ಚರಿಸಿದ್ದಾರೆ.