

2021ರ ದಂಗೆಯ ನಂತರ ಆಲ್ಫಾ ಕಾಂಡೆ ಗಿನಿಯಾ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಂಡರು. ಆ ಬಳಿಕ ಅಧ್ಯಕ್ಷ ಸ್ಥಾನಕ್ಕೇರಿದ ಗಿನಿಯಾದ ಜುಂಟಾ ನಾಯಕ ಮಮಡಿ ಡೌಂಬೌಯಾ ತನ್ನನ್ನು ತಾನೇ ಅಧ್ಯಕ್ಷ ಎಂದು ಘೋಷಿಸಿಕೊಂಡರು. ಈ ವೇಳೆ ಚುನಾವಣಾ ಪ್ರವಾರದ ಭಾಗವಾಗಿ ಹಾಗೂ ತನಗೆ ಗೌರವಾರ್ಥವಾಗಿ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು
ಗಿನಿಯಾದ ಜುಂಟಾ ನಾಯಕ ಮಮಡಿ ಡೌಂಬೌಯಾ ಅವರ ಗೌರವಾರ್ಥವಾಗಿ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ವೇಳೆ ರೆಫ್ರಿ ನೀಡಿದ ವಿವಾದಿತ ತೀರ್ಪು ಅಭಿಮಾನಿಗಳ ಘರ್ಷಣೆಗೆ ಕಾರಣವಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದಾಗಿ ತಿಳಿದುಬಂದಿದೆ. ಈ ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ರೆಫ್ರಿ ತೀರ್ಪಿನಿಂದ ರೊಚ್ಚಿಗೆದ್ದು ಘರ್ಷಣೆಗೆ ಇಳಿದಿದ್ದರು. ಈ ವೇಳೆ ಸಮೀದಲ್ಲಿದ್ದ ಪೊಲೀಸ್ ಠಾಣೆಯನ್ನೂ ಧ್ವಂಸಗೊಳಿಸಿದ್ದಾರೆ ಎಂದು ಹೇಳಿರುವುದಾಗಿ ವರದಿಯಾಗಿದೆ. ಕೆಲವರ ದೇಹಗಳನ್ನ ಆಸ್ಪತ್ರೆಯ ವರಾಂಡದಲ್ಲಿ ಇಡಲಾಗಿತ್ತು. 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ ಎನ್ನಲಾಗಿದೆ.