ಅಹಮದಾಬಾದ್ ಮತ್ತು ಸೂರತ್‌ನಲ್ಲಿ 550 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶ ವಲಸಿಗರ ಬಂಧನ| Arrest

bangla
Published on

ಗುಜರಾತ್ ಪೊಲೀಸರು ರಾಜ್ಯಾದ್ಯಂತ ಬೃಹತ್ ಕಾರ್ಯಾಚರಣೆ ನಡೆಸಿ, ಅಹಮದಾಬಾದ್ ಮತ್ತು ಸೂರತ್‌ನಲ್ಲಿ 550 ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಿದ್ದಾರೆ. ಇವರು ಭಾರತದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಪರಿಶೀಲನೆ ಮತ್ತು ವಿಚಾರಣೆಯ ನಂತರ ಗಡೀಪಾರು ಮಾಡುವ ಪ್ರಕ್ರಿಯೆಗಳನ್ನು ಮುಂದುವರೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಭೀಕರ ಗುಂಡಿನ ದಾಳಿಯಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಪಾಕಿಸ್ತಾನಕ್ಕೆ ರಾಜತಾಂತ್ರಿಕವಾಗಿಯೇ ಉತ್ತರವನ್ನು ನೀಡುವ ಮೂಲಕ ದಶ ದಿಕ್ಕುಗಳಿಂದ ನಿರ್ಬಂಧವನ್ನು ಹೇರಿತ್ತು. ಕೇಂದ್ರ ನಿರ್ಧಾರದ ಜತೆಗೆ ರಾಜ್ಯ ಸರ್ಕಾರಗಳು ಕೂಡ ಪಾಕ್ ಪ್ರಜೆಗಳನ್ನು ಭಾರತದಿಂದ ಹೊರಗೆ ಕಳುಹಿಸಲು ಸಿದ್ಧತೆಗಳನ್ನು ನಡೆಸಿದೆ. ಈ ತಿಂಗಳ ಒಳಗೆ ಭಾರತ ಬಿಡುವಂತೆ ಆದೇಶವನ್ನು ನೀಡಿದೆ. ಆದರೆ ಗುಜರಾತ್ ಒಂದು ಹೆಜ್ಜೆ ಮುಂದೆ ಹೋಗಿದೆ. ಪ್ರಧಾನಿ ಮೋದಿ ಅವರ ತವರು ರಾಜ್ಯವಾದ ಗುಜರಾತ್​​ನಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದಿರುವ ಪ್ರಜೆಗಳನ್ನು ಬಂಧಿಸಿದೆ.

ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಎಲ್ಲ ಪ್ರಕ್ರಿಯೆಗಳು ನಡೆದ ನಂತರ ಅವನ್ನು ಗಡಿಪಾರು ಮಾಡುವುದಾಗಿ ಗುಜರಾತ್​​​ ಪೊಲೀಸರು ಹೇಳಿದ್ದಾರೆ.

ಇಂದು (26) ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಹಮದಾಬಾದ್‌ನಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಪ್ರಧಾನ ಕಚೇರಿಯ ತಂಡಗಳು ಅಕ್ರಮ ವಲಸಿಗರೆಂದು ಶಂಕಿಸಲಾಗಿರುವ 450 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಬಂಧಿಸಿವೆ. ಮುಂಜಾನೆ ನಡೆದ ಶೋಧ ಕಾರ್ಯಾಚರಣೆಯ ಸಮಯದಲ್ಲಿ 400 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಪರಾಧ ವಿಭಾಗದ ಡಿಸಿಪಿ ಅಜಿತ್ ರಾಜಿಯನ್ ತಿಳಿಸಿದ್ದಾರೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net