

ರಾಯಚೂರು: ದೇವದುರ್ಗ ಮಿನಿ ವಿಧಾನಸೌಧ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಚೇರಿಯಲ್ಲಿದ್ದ ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ.
ಮಿನಿ ವಿಧಾನಸೌಧ ಕಟ್ಟಡದ ರೂಂ ನಂಬರ್ 3ರಲ್ಲಿ ಭಾನುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಹಲವು ದಾಖಲೆಗಳು ಸುಟ್ಟು ಕರಕಲಾಗಿದ್ದವು.
ಮಿನಿ ವಿಧಾನಸೌಧದಲ್ಲಿ ಶಿರಸ್ತೇದಾರ್ ಬಳಸುತ್ತಿದ್ದ ಕಂಪ್ಯೂಟರ್ ಹಾಗೂ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದು ಬಂದಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.