

ನವದೆಹಲಿ : ಕರೊನಾದಿಂದ ಭಾರತ ತತ್ತರಿಸುವ ಈ ಸಮಯದಲ್ಲಿ ಅನೇಕ ರಾಷ್ಟ್ರಗಳು ಸಹಾಯ ಹಸ್ತ ಚಾಚುತ್ತಿವೆ. ಕರೊನಾ ರೋಗಿಗಳ ಚಿಕಿತ್ಸೆಯಲ್ಲಿ ಅಗತ್ಯವಾಗಿರುವ ಆಕ್ಸಿಜನ್ ಕೊರತೆಯನ್ನು ನೀಗಿಸಲು ಅಮೆರಿಕದಿಂದ 318 ಆಕ್ಸಿಜನ್ ಕಾನ್ಸ್ಂಟ್ರೇಟರ್ಗಳು ಇಂದು ರಾಷ್ಟ್ರ ರಾಜಧಾನಿ ದೆಹಲಿಯನ್ನು ತಲುಪಿವೆ.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, "ಕರೊನಾ ವಿರುದ್ಧದ ಹೋರಾಟವನ್ನು ಬಲಪಡಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅನುಮಾನ ಬೇಡ" ಎಂದು ಟ್ವೀಟ್ ಮಾಡಿದ್ದಾರೆ. ಅಮೆರಿಕದ ಜೆಎಫ್ಕೆ ವಿಮಾನ ನಿಲ್ದಾಣದಿಂದ ದೆಹಲಿ ವಿಮಾನ ನಿಲ್ದಾಣಕ್ಕೆ 318 ಫಿಲಿಪ್ಸ್ ಆಕ್ಸಿಜನ್ ಕಾನ್ಸಂಟ್ರೇಟರ್ಗಳ ಕನ್ಸೈನ್ಮೆಂಟ್ಅನ್ನು ಏರ್ ಇಂಡಿಯಾ ವಿಮಾನ ಹೊತ್ತುತಂದಿದೆ ಎಂದು ತಿಳಿಸಿದ್ದಾರೆ.
ಸಿಂಗಪೂರ್ನಿಂದ ಕೂಡ ಈ ನಿಟ್ಟಿನಲ್ಲಿ ಸಹಾಯ ಹರಿದುಬಂದಿದೆ. 500 ಬಿಪಿಎಪಿಗಳು, 250 ಆಕ್ಸಿಜನ್ ಕಾನ್ಸಂಟ್ರೇಟರ್ಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳು ಸಿಂಗಪೂರ್ನಿಂದ ಏರ್ ಇಂಡಿಯಾ ವಿಮಾನದಲ್ಲಿ ನಿನ್ನೆ ರಾತ್ರಿ ಮುಂಬೈ ತಲುಪಿವೆ ಎನ್ನಲಾಗಿದೆ. (ಏಜೆನ್ಸೀಸ್)