ಆಮ್ಲಜನಕ ಬೆಲೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳೇನು?

High Court vvani
Published on

 ರಾಜ್ಯ ಸರ್ಕಾರದಿಂದ ವಿವರಣೆ ಕೇಳಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿನ ಆಸ್ಪತ್ರೆಗಳಿಗೆ ಆಮ್ಲಜನಕದ ಸಮರ್ಪಕ ಪೂರೈಕೆ ಹಾಗೂ ಕೇಂದ್ರ ಸರ್ಕಾರದ ಆದೇಶದಂತೆ ಅದರ ಬೆಲೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಕರೊನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಕ್ರಂ ಹುಯಿಲಗೋಳ ಲಿಖಿತ ಹೇಳಿಕೆ ಸಲ್ಲಿಸಿ, ರಾಜ್ಯದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಪ್ರತಿದಿನ ಅಂದಾಜು 236.56 ಮೆಟ್ರಿಕ್ ಟನ್ ಆಮ್ಲಜನಕ ಬೇಡಿಕೆ ಇದ್ದು, ಸದ್ಯ 376 ಮೆಟ್ರಿಕ್ ಲಭ್ಯತೆ ಇದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅದಕ್ಕೆ ನ್ಯಾಯಪೀಠ, ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿದೆ ಎಂದಾದರೂ, ಅದು ಆಸ್ಪತ್ರೆಗಳಿಗೆ, ಅದರಲ್ಲೂ ಗ್ರಾಮೀಣ ಭಾಗಗಳ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಪೂರೈಕೆಯಾಗುತ್ತಿದೆಯೇ, ಅದರ ಬೆಲೆ ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ, ಯಾವ ಪ್ರಾಧಿಕಾರ ಬೆಲೆ ನಿಯಂತ್ರಿಸುತ್ತದೆ ಎಂಬೆಲ್ಲ ಅಂಶಗಳ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಅ.6ಕ್ಕೆ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net