ಕಾಂಗ್ರೆಸ್ ಪ್ರಣಾಳಿಕೆಯ ನಕಲು; ಪಿ.ಚಿದಂಬರಂ ಪ್ರತಿಕ್ರಿಯೆ

chidambaram
Published on

ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್, 2024ನೇ ಸಾಲಿನಲ್ಲಿ ನಡೆದ ಲೋಕಸಬಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯ ನಕಲು ಇದ್ದಂತಿದೆ ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ವಿಶಿಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಪಕ್ಷದ ಹಲವು ಯೋಜನೆಗಳನ್ನು ತಮ್ಮ ಬಜೆಟ್‌ನಲ್ಲಿ ಅಳವಡಿಸಿಕೊಂಡಿರುವುದು ನನಗೆ ಬಹಳ ಸಂತೋಷ ತಂದಿದೆ. ಶಿಷ್ಯ ಭತ್ಯೆ, ಉದ್ಯೋಗ ಲಿಂಕ್ಡ್ ಇನ್ಸೆಂಟಿವ್ ಹೀಗೆ ಹಲವು ಉದಾಹರಣೆಗಳನ್ನು ಕೊಡಬಹುದು ಎಂದು ವ್ಯಂಗ್ಯವಾಗಿ ಅವರು ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net