ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ

BJP
Published on

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಎಸ್‌ಸಿಪಿ ಟಿಎಸ್‌ಪಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿರುವ ಕುರಿತು ಜನ ಜಾಗೃತಿ ಮೂಡಿಸಲು ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಲು ಬಿಜೆಪಿ ಎಸ್ಸಿ ಮೋರ್ಚಾ ನಿರ್ಧರಿಸಿದೆ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯ ಸ್ವಾಮಿ ತಿಳಿಸಿದರು.

ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ದಲಿತರಿಗಾಗಿ ಇಟ್ಟಿದ್ದ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣದ 11,700 ಕೋಟಿ ಹಣವನ್ನು ಗ್ಯಾರಂಟಿಗಾಗಿ ಬಳಸಿಕೊಂಡಿತ್ತು. ಇದು ದಲಿತರಿಗೆ ಮಾಡಿದ ದೋಖಾ. ಇದರ ವಿರುದ್ಧ ಎಸ್‌ಸಿ ಮೋರ್ಚಾ ಪ್ರಥಮ ದಿನದಿಂದ ಹೋರಾಟ ಮಾಡಿದೆ ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net