ಕಾಲ್ನಡಿಗೆ ಮೂಲಕ ಮ.ಬೆಟ್ಟಕ್ಕೆ ತೆರಳಿದ ಭಕ್ತರು

12 HANUR 1
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು : ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ದೇವಿರಮ್ಮನಹಳ್ಳಿ ಗ್ರಾಮಸ್ಥರು ಭಾನುವಾರ ಹನೂರಿನ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯ ಮೂಲಕ ತೆರಳಿದರು.

ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾ ಶಿವರಾತ್ರಿ, ಮಹಾಲಯ ಅಮಾವಾಸ್ಯೆ, ದೀಪಾವಳಿ ಹಾಗೂ ಯುಗಾದಿ ಜಾತ್ರಾ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಕಾಲ್ನಡಿಗೆ ಮೂಲಕ ತೆರಳುತ್ತಾರೆ. ಆದರೆ ಮಕರ ಸಂಕ್ರಾಂತಿ ವೇಳೆ ತೆರಳುವವರ ಸಂಖ್ಯೆ ಕಡಿಮೆ. ಹೀಗಿರುವಾಗ ನಂಜನಗೂಡಿನ ದೇವಿರಮ್ಮನಹಳ್ಳಿ ಗ್ರಾಮಸ್ಥರು ಕಳೆದ 10 ವರ್ಷದಿಂದಲೂ ಜಮೀನಿನಲ್ಲಿ ಕಟಾವು ಮುಗಿದ ಬಳಿಕ ಮಾದಪ್ಪನ ಬೆಟ್ಟಕ್ಕೆ ಕಾಲ್ನಡಿಗೆಯ ಮೂಲಕ ತೆರಳುತ್ತಿದ್ದು, ಅದೇ ರೀತಿ ಭಾನುವಾರ ಸುಮಾರು 40ಕ್ಕೂ ಹೆಚ್ಚು ಭಕ್ತರು ಹನೂರಿನ ಮೂಲಕ ಶ್ರೀ ಕ್ಷೇತ್ರಕ್ಕೆ ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net