

Terror Attack : ಜಮ್ಮು ಮತ್ತು ಕಾಶ್ಮೀರನ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಉಗ್ರರದಾಳಿಗೆ ಗುಪ್ತಚರ ಇಲಾಖೆಗೆ ಕಾರಣ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.
ಈ ಕುರಿತು ಹೈದರಾಬಾದ್ನಲ್ಲಿ ಸುದ್ದಿಗಾರರ ಜತೆ ಬುಧವಾರ ಮಾತನಾಡಿದರು. ಉರಿ ಮತ್ತು ಪುಲ್ವಾಮಾ ಘಟನೆಗಳಿಗಿಂತ ಇದು ಹೆಚ್ಚು ಅಪಾಯಕಾರಿ ಮತ್ತು ನೋವಿನಿಂದ ಈ ಘಟನೆ ಕೂಡಿದೆ ಎಂದಿದ್ದಾರೆ.
ಈ ಘಟನೆಗೆ ನರೇಂದ್ರ ಮೋದಿ ಸರ್ಕಾರ ಹೊಣೆಗಾರಿಕೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ ಓವೈಸಿ, ''ಪಹಲ್ಗಾಮ್‌ನಲ್ಲಿ ಧರ್ಮ ಕೇಳಿದ ನಂತರ ಭಯೋತ್ಪಾದಕರು ಅಮಾಯಕ ಜನರನ್ನು ನಿರ್ದಾಕ್ಷಿಣ್ಯವಾಗಿ ಕೊಂದರು. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಇನ್ನೊಂದು ಪ್ರಮುಖ ವಿಷಯವೆಂದರೆ ಇದು ಗುಪ್ತಚರ ವೈಫಲ್ಯವೂ ಆಗಿದೆ" ಎಂದು ಮರು ಉಚ್ಚರಿಸಿದ್ದಾರೆ.
ಸರ್ಕಾರವು ಈ ಎಲ್ಲಾ ಭಯೋತ್ಪಾದಕರಿಗೆ ಪಾಠ ಕಲಿಸುತ್ತದೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಆದಷ್ಟು ಬೇಗ ನ್ಯಾಯ ಒದಗಿಸಲಿದೆ ಎಂದು ಆಶಿಸಿತ್ತೇನೆ ಎಂದರು.
ಮಂಗಳವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದಂತೆ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.(ಏಜೆನ್ಸೀಸ್)