ಪಹಲ್ಗಾಮ್‌ನಲ್ಲಿ ಉಗ್ರರ ಭೀಕರ ದಾಳಿ; 20ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿರುವ ಶಂಕೆ | Pahalgam Terror Attack

ವಿಜಯವಾಣಿ (49)
Published on

Pahalgam Terror Attack: ಇಂದು (ಏ.22) ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಭೀಕರ ಗುಂಡಿನ ದಾಳಿಗೆ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಕರ್ನಾಟಕದ ಶಿವಮೊಗ್ಗದ ವಿಜಯನಗರ ನಿವಾಸಿ ರಿಯಲ್​​ ಎಸ್ಟೇಟ್​ ಉದ್ಯಮಿ ಮಂಜುನಾಥ್​ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಳೆದ 30 ವರ್ಷಗಳಲ್ಲಿ ಇದು ಭೀಕರ ದಾಳಿ ಎನ್ನಲಾಗಿದ್ದು, ಉಗ್ರರ ಗುಂಡಿನ ದಾಳಿಗೆ ಬಲಿಯಾದ ಪ್ರವಾಸಿಗರ ಸಂಖ್ಯೆ 27ಕ್ಕೂ ಹೆಚ್ಚಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿಆರ್​ಪಿಎಫ್ ಸಿಬ್ಬಂದಿಗಳು ರಕ್ಷಣಾ​ ಕಾರ್ಯಾಚರಣೆಗೆ ಮುಂದಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಖಂಡನೆ

"ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.

ಮೋದಿ ಎಚ್ಚರಿಕೆ

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ಮೋದಿ, "ಈ ಹೇಯ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು. ಅವರನ್ನು ಬಿಡುವುದಿಲ್ಲ. ಅವರ ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಇನ್ನಷ್ಟು ಬಲಗೊಳ್ಳಲಿದೆ” ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net