

ಮೈಸೂರು: ವಿಶ್ವ ಯೋಗ ದಿನದ ಅಂಗವಾಗಿ ಪರಮಹಂಸ ಯೋಗ ಮಹಾವಿದ್ಯಾಲಯದ ವತಿಯಿಂದ ಅಂತರ ಶಾಲಾ ಚಿತ್ರಕಲಾ ಸ್ಪರ್ಧೆಯನ್ನು ಜೂ.23ರಂದು ಬೆಳಗ್ಗೆ 10.30ಕ್ಕೆ ರಾಮಕೃಷ್ಣ ನಗರದಲ್ಲಿರುವ ಪರಮಹಂಸ ಯೋಗ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಯೋಗ ಮಹಾವಿದ್ಯಾಲಯದ ಅಧ್ಯಕ್ಷ ಶಿವಪ್ರಕಾಶ್ ತಿಳಿಸಿದರು.
ಇಂಟರ್‌ನ್ಯಾಷನಲ್ ಯೋಗ ಸ್ಕೂಲ್ ಆಶ್ರಯದಲ್ಲಿ ನಡೆಯುತ್ತಿರುವ ಸ್ಪರ್ಧೆಯಲ್ಲಿ 1 ರಿಂದ 7ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಾಗೇ 6ರಿಂದ 15 ವರ್ಷದ ವಿದ್ಯಾರ್ಥಿಗಳಿಗಾಗಿ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ 6ನೇ ಇಂದ್ರಿಯ ಜಾಗೃತಿಗೊಳಿಸುವ ಅಂತರ್‌ದೃಷ್ಟಿ ವಿದ್ಯೆ 18ನೇ ಬ್ಯಾಚ್ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿದ್ದು ಹೆಚ್ಚಿನ ಮಾಹಿತಿಗಾಗಿ ಮೊ.9035506790 ಸಂಪರ್ಕಿಸಿ ಎಂದರು.
ಸುದ್ದಿಗೋಷ್ಠಿಯಲ್ಲಿ ಪರಮಹಂಸ ಯೋಗ ಮಹಾವಿದ್ಯಾಲಯದ ಯೋಗ ಪ್ರಕಾಶ್, ಸೋಮಶೇಖರ್, ಚಾಣಕ್ಯ ಇತರರಿದ್ದರು.