ಆತ್ಮಾಹುತಿ ಬಾಂಬ್​ ದಾಳಿ; ಇದರ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ ಪಾಕ್​

bomb blast
Published on

ನವದೆಹಲಿ: ಪಾಕಿಸ್ತಾನದಲ್ಲಿ ಶುಕ್ರವಾರ ಸಂಭವಿಸಿದ ಎರಡು ಪ್ರತ್ಯೇಕ ಆತ್ಮಾಹುತಿ ಬಾಂಬ್​ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 65ಕ್ಕೆ ಏರಿಕೆಯಾಗಿದ್ದು, ಘಟನೆ ಹಿಂದೆ ಭಾರತದ ಗುಪ್ತಚರ ಸಂಸ್ಥೆ ರಾ ಕೈವಾಡ ಇದೆ ಎಂದು ಪಾಕಿಸ್ತಾನ ಸರ್ಕಾರ ಆರೋಪಿಸಿದೆ.

ಈ ಕುರಿತು ಮಾತನಾಡಿರುವ ಪಾಕಿಸ್ತಾನದ ಆಂತರಿಕ ಸಚಿವ ಸರ್ಫರಾಜ್ ಬುಗ್ತಿ ಆತ್ಮಾಹುತಿ ದಾಳಿಯ ಹಿಂದೆ ಯಾರ ಕೈವಾಡ ಇದ್ದರೂ ಸಹ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆತ್ಮಾಹುತಿ ಬಾಂಬ್​ ದಾಳಿಗೆ ಸಂಬಂಧಿಸಿದಂತೆ ಸರ್ಕಾರದ ಎಲ್ಲಾ ತನಿಖಾ ಸಂಸ್ಥೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ. ಆತ್ಮಾಹುತಿ ಬಾಂಬ್​ ದಾಳಿಯ ಹಿಂದೆ ಭಾರತದ ಗುಪ್ತಚರ ಸಂಸ್ಥೆ ರಾ ಭಾಗಿಯಾಗಿದೆ. ಈ ವಿಚಾರವನ್ನು ನಾವು ಗಂಭಿರವಾಗಿ ಪರಿಗಣಿಸಿದ್ದು, ಯಾರನ್ನೂ ಸುಮ್ಮನೇ ಬಿಡುವ ಮಾತಿಲ್ಲ ಎಂದು ಪಾಕಿಸ್ತಾನದ ಆಂತರಿಕ ಸಚಿವ ಸರ್ಫರಾಜ್ ಬುಗ್ತಿ ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್​ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 65 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net