ಯುಎನ್​ಜಿಎ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಷ್ ಅಸಂಬದ್ಧ ಭಾಷಣ: ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು| UN

Untitled design - 2025-09-27T083552.591
Published on

UN: ವಿಶ್ವಸಂಸ್ಥೆಯ ಸಾಮಾನ್ಯ ಸಭೆ 80ನೇ ಅಧಿವೇಶನದಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅಸಂಬದ್ಧ ಭಾಷಣಕ್ಕೆ ಶುಕ್ರವಾರ(ಸೆ. 26) ವಿಶ್ವಸಂಸ್ಥೆಯಲ್ಲಿ ಭಾರತ ತೀವ್ರ ತಿರುಗೇಟು ನೀಡಿದ್ದು, ಪಾಕ್ ವಿದೇಶಾಂಗ ನೀತಿಯೂ ಭಯೋತ್ಪಾದನೆಯ ಕೇಂದ್ರ ಬಿಂದುವಾಗಿದೆ ಎಂದು ವಾಗ್ದಾಳಿ ನಡೆಸಿದೆ.

ಸಾಮಾನ್ಯ ಸಭೆಯ 80ನೇ ಅಧಿವೇಶನದಲ್ಲಿ ಮಾತನಾಡಿದ್ದ ಪ್ರಧಾನಿ ಶೆಹಬಾಜ್ ಷರೀಫ್, ಈ ವರ್ಷ ಆರಂಭದಲ್ಲಿ ತಮ್ಮ ದೇಶ ಭಾರತದಿಂದ ಅಪ್ರಚೋದಿತ ದಾಳಿಗೆ ಬಲಿಯಾಗಿತ್ತು. ಆದರೆ ಪಾಕ್​ನ ಸಶಸ್ತ್ರ ಪಡೆಗಳು ಅದನ್ನು ಹಿಮ್ಮೆಟ್ಟಿಸಿದವು. ಭಾರತದ ಹಲವು ಜೆಟ್​ಗಳನ್ನು ಹೊಡೆದುರುಳಿಸಿದ್ದೇವೆ ಎಂದು ಅಸಂಬದ್ಧ ಭಾಷಣ ಮಾಡಿದ್ದರು.

ಪಾಕ್ ಪ್ರಧಾನಿಯ ಈ ಹೇಳಿಕೆಗೆ ವಿಶ್ವಸಂಸ್ಥೆಯಲ್ಲಿ ತಿರುಗೇಟು ನೀಡಿರುವ ಭಾರತೀಯ ರಾಜತಾಂತ್ರಿಕ ರಾಯಭಾರಿ, ಪೆಟಲ್ ಗಹ್ಲೋಟ್, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕಾರಣವಾದ ಭಯೋತ್ಪಾದಕ ಸಂಘಟನೆ 'ದಿ ರೆಸಿಸ್ಟೆನ್ಸ್ ಫ್ರಂಟ್' ಅನ್ನು ರಕ್ಷಿಸಿದ್ದಕ್ಕಾಗಿ ಮತ್ತು ಒಸಾಮಾ ಬಿನ್ ಲಾಡೆನ್‌ಗೆ ಆಶ್ರಯ ನೀಡಿದ್ದಕ್ಕಾಗಿ ಪಾಕಿಸ್ತಾನದ ಕುತಂತ್ರವನ್ನು ಬಹಿರಂಗಪಡಿಸಿದರು.

ಯಾವುದೇ ನಾಟಕ ಅಥವಾ ಸುಳ್ಳು, ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಸಂಘಟನೆಯಾದ 'ದಿ ರೆಸಿಸ್ಟೆನ್ಸ್ ಫ್ರಂಟ್' ಅನ್ನು ಭಾರತೀಯ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಬರ್ಬರ ಹತ್ಯಾಕಾಂಡವನ್ನು ನಡೆಸುವ ಜವಾಬ್ದಾರಿಯಿಂದ ರಕ್ಷಿಸಿದ್ದು ಇದೇ ಪಾಕಿಸ್ತಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾಕಿಸ್ತಾನವು ಭಯೋತ್ಪಾದನೆಯನ್ನೂ ಹುಟ್ಟು ಹಾಕುವಲ್ಲಿ ಮತ್ತು ರಪ್ತು ಮಾಡುವಲ್ಲಿ ಬಹಳ ಹಿಂದಿನಿಂದಲೇ ಅದರಲ್ಲಿ ಮುಳುಗಿದೆ. ಈಗ ಭಯೋತ್ಪಾದನೆಯ ವಿರುದ್ಧದ ಯುದ್ಧದಲ್ಲಿ ಪಾಲುದಾರನಂತೆ ನಟಿಸುತ್ತಿದೆ. ಆದರೆ ಇದೇ ದೇಶವು ಒಸಾಮಾ ಬಿನ್ ಲಾಡೆನ್‌ಗೆ ಒಂದು ದಶಕದ ಕಾಲ ಆಶ್ರಯ ನೀಡಿದ್ದನ್ನು ನೆನಪಿಸಿ ವಾಗ್ದಾಳಿ ನಡೆಸಿದರು.

ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಯೋತ್ಪಾದನೆ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಪಾಕಿಸ್ತಾನ ಸೇನೆ ಹಿಮ್ಮೆಟ್ಟಿಸಿತು ಎಂಬ ಪಾಕ್ ಪ್ರಧಾನಿ ಹೇಳಿಕೆ ಸುಳ್ಳು. ಮೇ 10ರಂದು ಪಾಕ್ ಸೇನೆಯೇ ಕಾರ್ಯಾಚರಣೆ ನಿಲ್ಲಿಸುವಂತೆ ನಮಗೆ ಮನವಿ ಮಾಡಿತು ಎಂದು ಹೇಳಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net