

Terror attack| ಪ್ರವಾಸಿಗರ ಮೇಲೆ ಮಾರಕ ದಾಳಿಯ ನಂತರ ಪರಮಾಣು ಶಸ್ತ್ರಸಜ್ಜಿತ ಪ್ರತಿಸ್ಪರ್ಧಿಗಳು ಪ್ರತಿದಾಳಿ ರಾಜತಾಂತ್ರಿಕ ದಾಳಿಯನ್ನು ಹೆಚ್ಚಿಸುತ್ತಿದ್ದಂತೆ, ಕಾಶ್ಮೀರದ ವಿವಾದಿತ ಹಿಮಾಲಯ ಪ್ರದೇಶದಲ್ಲಿ ಪಾಕಿಸ್ತಾನದ ಸೈನಿಕರು ಭಾರತೀಯ ಸೇನೆಯೊಂದಿಗೆ ಗುಂಡಿನ ಚಕಮಕಿ ನಡೆಸಿದ್ದಾರೆ ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಈಗಾಗಲೇ ಭಾರತ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದೆ. ಇದರಿಂದ ಭಯಗೊಂಡಿರುವ ಪಾಕಿಸ್ತಾನ ಭಾರತದ ಗಡಿ ಪ್ರದೇಶದ ಕಡೆಗೆ ಟ್ಯಾಂಕ್ಗಳು, ಫಿರಂಗಿ ಮತ್ತು ಇತರ ಭಾರೀ ಶಸ್ತ್ರಾಸ್ತ್ರಗಳನ್ನು ಕಳುಹಿಸಲು ಪ್ರಾರಂಭಿಸಿದೆ.
ಭಾರತ ಹಾಗೂ ಕಾಶ್ಮೀರದ ಹಿಮಾಲಯ ಪ್ರದೇಶದ ಗಡಿಯಲ್ಲಿ ಭಾರತೀಯ ಸೇನೆ ಮತ್ತು ಪಾಕಿಸ್ತಾನ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಪರಮಾಣು ಶಸ್ತ್ರಸಜ್ಜಿತ ದಾಳಿ-ಪ್ರತಿದಾಳಿಗಳು ಇನ್ನೂ ಕೂಡ ತೀವೃ ಪ್ರಮಾಣದಲ್ಲಿ ಮುಂದುವರೆಯುವ ಸಾಧ್ಯತೆ ಹೆಚ್ಚಾಗಿದೆ.
ಇದೀಗ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಐದು ಹಂತದ ರಾಜತಾಂತ್ರಿಕ ಪ್ರತಿದಾಳಿಯ ಭಾಗವಾಗಿ ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿರುವುದಾಗಿ ಭಾರತ ತಿಳಿಸಿದೆ. ಇದೀಗ ಭಾರತದಲ್ಲಿ ವಾಸಿಸುತ್ತಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡೀಪಾರು ಮಾಡುವಂತೆ ಮುಖ್ಯಮಂತ್ರಿಗಳಿಗೆ 'ಅಮಿತ್ ಶಾ' ಕರೆ ನೀಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದ ಬಗ್ಗೆ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ಬೇಗನೆ ಮರಳುವಂತೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳನ್ನು ತಿಳಿಸಿವೆ.
(ಏಜೆನ್ಸೀಸ್)