ಬಿಎಸ್​ಎಫ್ ಪೋಸ್ಟ್​ಗಳ ಮೇಲೆ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿ!

Indian army
Published on

ನವದೆಹಲಿ: ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿರುವುದು ಬೆಳಕಿಗೆ ಬಂದಿದ್ದು, ಜಮ್ಮು ಕಾಶ್ಮೀರದ ಗಡಿ ಪ್ರದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣಗೊಂಡಿದೆ. ದಾಳಿಯ ಕುರಿತು ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಖಚಿತ ಪಡಿಸಿದೆ.

ಆರ್​ಎಸ್​ ಪುರ ಸೆಕ್ಟರ್​ನ ಅಂತಾರಾಷ್ಟ್ರೀಯ ಗಡಿಭಾಗದ ಕದನವಿರಾಮ ಘೋಷಿತ ಪ್ರದೇಶದಲ್ಲಿ ಅದನ್ನು ಉಲ್ಲಂಘಿಸಿ ಪಾಕಿಸ್ತಾನ ಈ ದಾಳಿ ನಡೆಸಿದೆ. ಇಂದು ರಾತ್ರಿ 8 ಗಂಟೆ ಸುಮಾರಿಗೆ ಈ ಗುಂಡಿನ ದಾಳಿ ನಡೆದಿದೆ.

ಇಂದು ರಾತ್ರಿ 8 ಗಂಟೆ ಸುಮಾರಿಗೆ ಅರ್ನಿಯಾ ಪ್ರದೇಶದಲ್ಲಿನ ಬಿಎಸ್‌ಎಫ್ ಪೋಸ್ಟ್‌ಗಳ ಮೇಲೆ ಪಾಕ್ ರೇಂಜರ್‌ಗಳು ಅಪ್ರಚೋದಿತ ಗುಂಡಿನ ದಾಳಿಯನ್ನು ಪ್ರಾರಂಭಿಸಿದರು, ಇದಕ್ಕೆ ಬಿಎಸ್‌ಎಫ್ ಪಡೆಗಳು ಸೂಕ್ತವಾಗಿ ಪ್ರತೀಕಾರ ತೀರಿಸಿಕೊಂಡಿವೆ. ಇನ್ನೂ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಬಿಎಸ್​ಎಫ್ ಪಿಆರ್​ಒ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net